ಎಚ್ ಡಿ ಕುಮಾರಸ್ವಾಮಿ 
ರಾಜಕೀಯ

ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡಲ್ಲ: ಎಚ್.ಡಿ. ಕುಮಾರಸ್ವಾಮಿ

ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸ್ಪಷ್ಪಪಡಿಸಿದ್ದಾರೆ.

ಬೆಂಗಳೂರು: ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಪಪಡಿಸಿದ್ದಾರೆ.

ಜೆಡಿಎಸ್ ಜೊತೆಗಿನ ವಿಲೀನ ಸಂಬಂಧ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ಹೊರಬಿದ್ದ ಬೆನ್ನಲ್ಲೇ, ಟ್ವೀಟ್ ಮಾಡಿರುವ ಕುಮಾರ ಸ್ವಾಮಿ,  ಜನರ ಗಟ್ಟಿ ಧ್ವನಿಯಾದ ಜೆಡಿಎಸ್‌ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಕಪೋಲಕಲ್ಪಿತ ಸುದ್ದಿಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ ಎಂದಿದ್ದಾರೆ. 

'ರೈತರ ಸಾಲಮನ್ನಾ', 'ಬಡವರ ಬಂಧು' ಇಂತಹ ಕಾರ್ಯಕ್ರಮಗಳನ್ನು ನೀಡಿದ, ಶಿಸ್ತುಬದ್ಧ ಆಡಳಿತ ನಡೆಸಿದ, ದೇವೇಗೌಡರ ಆಶಯದಂತೆ ನಡೆಯುತ್ತಿರುವ ಜೆಡಿಎಸ್‌ ಮೇಲೆ ಜನರ ವಿಶ್ವಾಸವಿದೆ. ಮತ್ತೊಂದು ಪಕ್ಷದೊಂದಿಗೆ ವಿಲೀನ ಮಾಡಿಕೊಳ್ಳುವ ಮೂಲಕ ಸ್ವಯಂ ಆತ್ಮಹತ್ಯೆ ಮಾಡಿಕೊಳ್ಳುವ  ಸನ್ನಿವೇಶ ಬಂದಿಲ್ಲ,ಬರುವುದೂ ಇಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇನೆ ಎಂದಿದ್ದಾರೆ.     

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT