ರಾಜು ಗೌಡ 
ರಾಜಕೀಯ

ಸೋತವರಿಗೆ ಸಚಿವ ಸ್ಥಾನ ನೀಡಿದರೆ ಹೈದರಾಬಾದ್ ಕರ್ನಾಟಕಕ್ಕೆ ಅನ್ಯಾಯ: ಬಿಜೆಪಿ ಶಾಸಕ ರಾಜುಗೌಡ

ಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡುವ ಸುದ್ದಿಗಳು ಬರುತ್ತಿವೆ. ಸೋತವರಿಗೆ ಸಚಿವ ಸ್ಥಾನ ನೀಡಿದರೆ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಬಿಜೆಪಿ ಶಾಸಕ ರಾಜುಗೌಡ  ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡುವ ಸುದ್ದಿಗಳು ಬರುತ್ತಿವೆ. ಸೋತವರಿಗೆ ಸಚಿವ ಸ್ಥಾನ ನೀಡಿದರೆ ಹೈದರಾಬಾದ್ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಬಿಜೆಪಿ ಶಾಸಕ ರಾಜುಗೌಡ  ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಾಸಕರ ಭವನದಲ್ಲಿ ಮಾತನಾಡಿದ ಅವರು, ಹೈದರಾಬಾದ್ ಕರ್ನಾಟಕ ಬಹಳ ಹಿಂದುಳಿದ ಪ್ರದೇಶ. ಈ ಭಾಗದಲ್ಲಿ ಆಡಳಿತಕ್ಕೆ ಬಂದಿದ್ದ ಕಾಂಗ್ರೆಸ್, ಜೆಡಿಎಸ್ ಸರ್ಕಾರ  ಕೆಲಸ ಮಾಡಿದೆ. ಈಗ ಬಿಜೆಪಿ ಸರ್ಕಾರ ಹೈದರಾಬಾದ್ ಕರ್ನಾಟಕಕ್ಕೆ ಒತ್ತು ಕೊಟ್ಟು ಈ ಭಾಗದವರಿಗೆ ಸಚಿವ ಸ್ಥಾನ ನೀಡಬೇಕು. ಹೈದರಾಬಾದ್ ಭಾಗಕ್ಕೆ ಒಂದು ಆದ್ಯತೆ  ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡುತ್ತೇನೆ ಎಂದರು.

ಸಂಪುಟ ವಿಸ್ತರಣೆ ಸ್ಥಾನಮಾನ ಸಂಬಂಧ ಈ ಭಾಗದ ನಾಯಕರೆಲ್ಲ ಸೇರಿ ಸಭೆ ಮಾಡಿದ್ದೇವೆ. ನಾಳೆಯೂ ಸಭೆ ನಡೆಸಿ ತೀರ್ಮಾನ ಮಾಡಿ ಬಳಿಕ ಮುಖ್ಯಮಂತ್ರಿ ಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ ಎಂದರು.

ತಾವು ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿಲ್ಲ. ಸೋತ ಸಿ‌.ಪಿ.ಯೋಗೇಶ್ವರ್ ಸೇರಿದಂತೆ ಕೆಲವರಿಗೆ ಮಂತ್ರಿಮಂಡಲದಲ್ಲಿ ಸ್ಥಾನ ನೀಡಿದರೆ ಸೋತವರಿಗೆ ಸಚಿವ ಸ್ಥಾನ ನೀಡುವುದು ಅನ್ಯಾಯ ಎಂದು ಖಂಡಿಸುವುದಾಗಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT