ಹಳ್ಳಿಹಕ್ಕಿ ಯಾರು ಗೊತ್ತಿಲ್ಲ ಎಂದ ಸಿದ್ದರಾಮಯ್ಯ
ಹಳ್ಳಿಹಕ್ಕಿ ಯಾರು ಎನ್ನುವುದು ನನಗೆ ಗೊತ್ತಿಲ್ಲ ಎಂದು ಹೇಳುವ ಮೂಲಕ ವಿಶ್ವನಾಥರ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ
ಬಾಗಲಕೋಟೆ: ಹಳ್ಳಿಹಕ್ಕಿ ಯಾರು ಎನ್ನುವುದು ನನಗೆ ಗೊತ್ತಿಲ್ಲ ಎಂದು ಹೇಳುವ ಮೂಲಕ ವಿಶ್ವನಾಥರ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ
ಸ್ವಕ್ಷೇತ್ರ ಬಾದಾಮಿಗೆ ಆಗಮಿಸಿರುವ ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮನುಷ್ಯರೆಲ್ಲ ಹಳ್ಳಿಹಕ್ಕಿ ಹೇಗೆ ಆಗುತ್ತಾರೆ. ನಾನು ಹಳ್ಳಿ ಹಕ್ಕಿ ನೋಡಿಲ್ಲ ಎಂದರು.
ಕೇಂದ್ರದಿಂದ ಅನುದಾನ ಕಡಿಮೆ ಕುರಿತು ಮಾತನಾಡಿದ ಅವರು ಅನೇಕ ಕಡೆಗಳಲ್ಲಿ ಕೇಂದ್ರ ಸರ್ಕಾರ ಅನುದಾನ ಕಡಿಮೆ ಮಾಡಿದೆ. ಸಮಾಜ ಕಲ್ಯಾಣ ಇಲಾಖೆ, ಎನ್ಆರ್ಇಜಿ ಯೋಜನೆಗೆ ೧೦ ಕೋಟಿ ಕಡಿಮೆ ಮಾಡಿದ್ದಾರೆ ಎಂದರು.
ಕೇಂದ್ರ ತೆರಿಗೆ ಖೋತಾ ವಿಷಯವಾಗಿ ಪ್ರತಿಕ್ರಿಯಿಸಿದ ಅವರು ರಾಜ್ಯಕ್ಕೆ ಮುಂದಿನ ವರ್ಷ ಕಡಿಮೆ ಹಣ ಆಗಲಿದೆ. ೯ ಸಾವಿರದಿಂದ ೧೧ ಸಾವಿರ ಕೋಟಿ ಕಡಿಮೆ ಆಗಲಿದೆ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.