ರಾಜಕೀಯ

ರಾಜ್ಯದಲ್ಲಿರುವುದು ಚುನಾಯಿತ ಸರ್ಕಾರವೇ? ಸರ್ವಾಧಿಕಾರಿ ಆಡಳಿತವೇ?: ಸಿದ್ದರಾಮಯ್ಯ ಕಿಡಿ

Shilpa D

ಬೆಂಗಳೂರು: ನಿಷೇಧಾಜ್ಞೆ ಹೇರಿ ಬಿಸಿಯೂಟ ಕಾರ್ಯಕರ್ತೆಯರ ಶಾಂತಿಯುತ ಪ್ರತಿಭಟನೆಗೂ ಅವಕಾಶ ನೀಡದೆ ಕಿರುಕುಳ ನೀಡುತ್ತಿರುವುದು ಖಂಡನೀಯ. 

ಜಿಲ್ಲಾ ಕೇಂದ್ರಗಳಲ್ಲಿಯೂ ಪೊಲೀಸರು ಕಾರ್ಯಕರ್ತೆಯರನ್ನು ಬೆದರಿಸುತ್ತಿರುವ ವರದಿಗಳು ಬರುತ್ತಿವೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ, ರಾಜ್ಯದಲ್ಲಿರುವುದು ಚುನಾಯಿತ ಸರ್ಕಾರವೇ? ಸರ್ವಾಧಿಕಾರಿ ಆಡಳಿತವೇ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮ ಸರ್ಕಾರ ಇದ್ದಾಗ ಪ್ರತಿಭಟನಾ ನಿರತ ಬಿಸಿಯೂಟ ಕಾರ್ಯಕರ್ತರ ಜೊತೆ ಮಾತುಕತೆ ನಡೆಸಿ‌ ಮಾಸಿಕ ರೂ. 500 ಗೌರವಧನ ಹೆಚ್ಚಿಸಿದ್ದೆ. ಪ್ರತಿಭಟನಕಾರರ ಮೇಲೆ ಪೊಲೀಸರನ್ನು ಛೂ ಬಿಟ್ಟಿರುವ ಈಗಿನ ಯಡಿಯೂರಪ್ಪ ಸರ್ಕಾರಕ್ಕೆ ಕನಿಷ್ಠ ಅವರ ಅಹವಾಲನ್ನು ಆಲಿಸುವ ಮನುಷ್ಯತ್ವವೂ ಇಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

SCROLL FOR NEXT