ಸಂಗ್ರಹ ಚಿತ್ರ 
ರಾಜಕೀಯ

ಯಡಿಯೂರಪ್ಪ ಸಚಿವ ಸ್ಥಾನದ ಮಾತುಕೊಟ್ಟಿದ್ದಾರೆ: ಉಮೇಶ್ ಕತ್ತಿ

ಸಿಎಂ ಬಿಎಸ್ ಯಡಿಯೂರಪ್ಪ ಅವರು ತಮಗೆ ಸಚಿವ ಸ್ಥಾನದ ಮಾತು ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.

ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರು ತಮಗೆ ಸಚಿವ ಸ್ಥಾನದ ಮಾತು ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.

ಬಹು ನಿರೀಕ್ಷೆಯ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಾಳೆ ನಡೆಯಲಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳು ಇಂದು ಬೆಳಗ್ಗೆಯಿಂದಲೇ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮನೆಗೆ ದಾಂಗುಡಿಯಿಡುತ್ತಿದ್ದಾರೆ. ಅಲ್ಲದೆ, ತಮಗೆ ಸಚಿವ ಸ್ಥಾನ ಖಾಯಂ ಮಾಡುವಂತೆ ಮತ್ತೊಂದು ಸುತ್ತಿನ ಲಾಬಿಗೆ ಮುಂದಾಗಿದ್ದಾರೆ. ಇದೇ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಶಾಸಕ ಉಮೇಶ್ ಕತ್ತಿ ಅವರು, ಎಂಟು ಬಾರಿ ಶಾಸಕನಾಗಿರುವ ತಮ್ಮನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತುಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಅವರ ಭೇಟಿ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಅವರು, ತಮ್ಮನ್ನು ಮಂತ್ರಿ ಮಾಡಿ ಎಂದು‌ ಕೇಳಿಲ್ಲ. ಆದರೆ ನನಗೆ ಸಚಿವ ಸ್ಥಾನ ಕೊಡುವುದಾಗಿ ಭರವಸೆ ನೀಡಿದ್ದಾರೆ. ಸಚಿವನನ್ನಾಗಿ ಮಾಡಿದರೆ ಕೆಲಸ‌ ಮಾಡುತ್ತೇನೆ. ಇಲ್ಲವಾದರೆ ಶಾಸಕನಾಗಿ ಕೆಲಸ ಮಾಡುತ್ತೇನೆ. ಸಚಿವ ಸ್ಥಾನ‌ತ್ಯಾಗ ಮಾಡುವಂತೆ ಯಾರೂ ನನಗೆ ಮನವೊಲಿಸಿಲ್ಲ. ನನಗೆ ಈ ಬಗ್ಗೆ ಯಾರೂ ಮಾತಾಡಿಲ್ಲ. ಹತ್ತು ಜನರು ಸಚಿವರಿಗೆ ಸ್ಥಾನ ನೀಡುವ ಬಗ್ಗೆ ಮಾಹಿತಿ ಇಲ್ಲ ಎಂದು ಹೇಲಿದರು.

ಅಂತೆಯೇ ಸಿಎಂ ಕರೆದರೆ ನಾಳೆಯೇ ಪ್ರಮಾಣವಚನ ಸ್ವೀಕರಿಸುತ್ತೇನೆ. ಇಲ್ಲದಿದ್ದರೆ ಶಾಸಕನಾಗಿ ಕ್ಷೇತ್ರದ ಕೆಲಸ ಮುಂದುವರೆಸುತ್ತೇನೆ. ಈವರೆಗೆ ಸಿಎಂರಿಂದ ಏನು ಮಾಹಿತಿ ಬಂದಿಲ್ಲ. ನಾನು ಮಂತ್ರಿ ಸ್ಥಾನಕ್ಕೆ ದುಂಬಾಲು ಬಿದ್ದಿಲ್ಲ. ದುಂಬಾಲು ಬಿದ್ದು ಸ್ಥಾನ ಕೇಳುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ