ರಾಜಕೀಯ

ನೂತನ ಸಚಿವರಿಗೆ ಶನಿವಾರದೊಳಗೆ ಖಾತೆ ಹಂಚಿಕೆ: ಸಿಎಂ ಯಡಿಯೂರಪ್ಪ

Lingaraj Badiger

ಬೆಂಗಳೂರು: ಗುರುವಾರ ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ 10 ಸಚಿವರಿಗೆ ಫೆಬ್ರವರಿ 8 ರೊಳಗೆ ಖಾತೆಗಳನ್ನು ಹಂಚಿಕೆ ಮಾಡಲಾಗುವುದು ಎಂದು  ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
  
ಪ್ರಮಾಣ ವಚನ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಖಾತೆ ಹಂಚಿಕೆ ಕುರಿತಂತೆ ದೆಹಲಿಗೆ ತಾವು ತೆರಳುತ್ತಿದ್ದು, ಭೇಟಿ ದಿನಾಂಕವನ್ನು ಶೀಘ್ರವೇ ಅಂತಿಮಗೊಳಿಸಲಾಗುವುದು. ದೆಹಲಿ ಭೇಟಿ ವೇಳೆ  ಸಚಿವ ಸಂಪುಟದಲ್ಲಿ ಮೂರು ಸಚಿವ ಸ್ಥಾನಗಳನ್ನು ಬಿಜೆಪಿ ಶಾಸಕರಿಗೆ ನೀಡುವ ಕುರಿತು ಕೇಂದ್ರ ನಾಯಕತ್ವದೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.  
  
ಪಕ್ಷದ ಶಾಸಕರಲ್ಲಿನ ಅಸಮಾಧಾನದಿಂದಾಗಿ ಬಿಜೆಪಿಯ ಹಿರಿಯ ಶಾಸಕರ ಸೇರ್ಪಡೆ  ಕೊನೆಯ ಕ್ಷಣದಲ್ಲಿ ಸ್ಥಗಿತಗೊಂಡಿದೆ. ಎಂಟು ಬಾರಿ ಆಯ್ಕೆಯಾಗಿರುವ ಬಿಜೆಪಿ ಶಾಸಕ ಉಮೇಶ್ ಕತ್ತಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದಾಗಿ ಯಡಿಯೂರಪ್ಪ ಭರವಸೆ ನೀಡಿದರು.
  
ಹಿಂದಿನ ಕಾಂಗ್ರೆಸ್-ಜೆಡಿ (ಎಸ್) ಮೈತ್ರಿಕೂಟದಿಂದ ಪಕ್ಷಾಂತರಗೊಂಡು ಡಿಸೆಂಬರ್ ನಲ್ಲಿ ನಡೆದ ಉಪಚುನಾವಣೆಯಲ್ಲಿ ಗೆದ್ದ 10 ಶಾಸಕರನ್ನು ಮುಖ್ಯಮಂತ್ರಿ ಸಚಿವ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ಆದರೆ. ಚುನಾವಣೆಯಲ್ಲಿ ಗೆದ್ದಿರುವ ಮತ್ತೊಬ್ಬ ಶಾಸಕ ಅಥಣಿಯ ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ನಿರಾಕರಿಸಲಾಗಿದೆ. 
  
ಕುಮಟಳ್ಳಿಗೆ ಯಡಿಯೂರಪ್ಪ ಅವರು ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು. ಅಸಮಧಾನಗೊಂಡಿರುವ ಕುಮಟಳ್ಳಿ ಇಂದು ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರು ಹಾಜರಾಗಿದ್ದರು.

SCROLL FOR NEXT