ಸಚಿವ ರಮೇಶ್ ಜಾರಕಿಹೊಳಿ 
ರಾಜಕೀಯ

ಬೆಳಗಾವಿ ಸಾಹುಕಾರ್ ಯಶಸ್ಸಿಗೆ ಡಿಕೆಶಿ ಕಾರಣವಂತೆ? ಕೊನೆಗೂ ಸತ್ಯ ಬಾಯ್ಬಿಟ್ಟ ಸಚಿವ ರಮೇಶ್ ಜಾರಕಿಹೊಳಿ 

ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಪತನಗೊಳಿಸಿ ಬಿಜೆಪಿ ಅಧಿಕಾರಕ್ಕೆ ಬರಲು ಪ್ರಮುಖ ಪಾತ್ರ ವಹಿಸಿದ ಸಚಿವ ರಮೇಶ್ ಜಾರಕಿಹೊಳಿ ಯಶಸ್ಸಿಗೆ ಡಿಕೆ ಶಿವಕುಮಾರ್ ಕಾರಣವಂತೆ. ಯಾವ ರೀತಿ ಕಾರಣವಾಗಿದ್ದಾರೆ ಎಂಬ ಸತ್ಯವನ್ನು ಕೊನೆಗೂ ಬಾಯ್ಬಿಟ್ಟಿದ್ದಾರೆ

ಬೆಳಗಾವಿ: ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಪತನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರಮೇಶ್ ಜಾರಕಿಹೊಳಿ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಭಾನುವಾರ ತಮ್ಮ ಸ್ವಕ್ಷೇತ್ರಕ್ಕೆ ಆಗಮಿಸಿದರು.

ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಕುರಿತು ವ್ಯಂಗ್ಯವಾಗಿ ಮಾತನಾಡಿದ ರಮೇಶ್ ಜಾರಕಿಹೊಳಿ, ನನ್ನ ಯಶಸ್ಸಿಗೆ ಡಿಕೆ ಶಿವಕುಮಾರ್ ಅವರಿಗೆ ಧನ್ಯವಾದಗಳು. ಬೆಳಗಾವಿ ರಾಜಕೀಯ ವ್ಯವಹಾರದಲ್ಲಿ ಡಿಕೆ ಶಿವಕುಮಾರ್ ತಲೆ ಹಾಕಿದ್ದರಿಂದ ನಾನು ರಾಜಕೀಯವಾಗಿ ಬೆಳೆಯಲು ಸಾಧ್ಯವಾಯಿತು. ಈ ಹಂತಕ್ಕೆ ಬಂದು ನಿಲ್ಲಲು ಸಾಧ್ಯವಾಯಿತು ಎಂದು ಹೇಳುವ ಮೂಲಕ ತಮ್ಮ ಯಶಸ್ಸಿನ ಗುಟ್ಟನ್ನು ಬಿಟ್ಟುಕೊಟ್ಟರು. 

ಮಹೇಶ್ ಕುಮಟಳ್ಳಿ ಮತ್ತಿತರರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸದೆ ಇರುವುದು ತಮ್ಮಗೆ ನೋವುಂಟು ಮಾಡಿದೆ. ಕುಮಟ್ಟಳ್ಳಿ ಒತ್ತಡದ ಹೇರಿದ ನಂತರವೇ ನಾನು ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸಿದೆ. ಬಾಲಚಂದ್ರ ಜಾರಕಿಹೊಳಿ ಮತ್ತು ಕುಮಟ್ಟಳ್ಳಿ ಅವರ ಪ್ರಯತ್ನದಿಂದಲೇ ನಾನು ಸಚಿವನಾಗಿರುವುದಾಗಿ ರಮೇಶ್ ಜಾರಕಿಹೊಳಿ ತಿಳಿಸಿದರು.

ಸತೀಶ್ ಜಾರಕಿಹೊಳಿ 20 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕೆಲಸ ಮಾಡಿರಲಿಲ್ಲ. ಕೇವಲ 2 ವರ್ಷಗಳಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ರಾಜಕೀಯದಲ್ಲಿ, ಯಾವ ಸಮಯದಲ್ಲಿ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ನಿರ್ಧರಿಸುವುದು ಬಹಳ ಮುಖ್ಯ. ನಿಮ್ಮನ್ನು ನಂಬಿದ ಜನರನ್ನು ಎಂದಿಗೂ ಕೈಬಿಡಬೇಡಿ.  ನನ್ನ ಸ್ವಂತ ಜನರು ನನ್ನನ್ನು ಬೆನ್ನಿಗೆ ಇರಿದರು ಮತ್ತು ಭವಿಷ್ಯದಲ್ಲಿ ಅವರನ್ನು ನಂಬುವ ತಪ್ಪನ್ನು ನಾನು ಪುನರಾವರ್ತಿಸುವುದಿಲ್ಲ ಎಂದು ಅವರು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT