ದಿನೇಶ್ ಗುಂಡೂರಾವ್-ಸಿದ್ದರಾಮಯ್ಯ 
ರಾಜಕೀಯ

ಪರಿಷತ್ ಚುನಾವಣೆ: ಸಿದ್ದರಾಮಯ್ಯ - ದಿನೇಶ್ ಗುಂಡೂರಾವ್ ರಹಸ್ಯ ಸಭೆ

ವಿಧಾನ ಪರಿಷತ್ತಿನ ಪಕ್ಷೇತರ ಅಭ್ಯರ್ಥಿ ಅನಿಲ್ ಕುಮಾರ್ ಅವರಿಗೆ ಪಕ್ಷದಿಂದ ಬೆಂಬಲ ನೀಡುವ ಸಂಬಂಧ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಜತೆ ರಹಸ್ಯ ಸಭೆ ನಡೆಸಿರುವ ಬಗ್ಗೆ ವರದಿಯಾಗಿದೆ.

ಬೆಂಗಳೂರು: ವಿಧಾನ ಪರಿಷತ್ತಿನ ಪಕ್ಷೇತರ ಅಭ್ಯರ್ಥಿ ಅನಿಲ್ ಕುಮಾರ್ ಅವರಿಗೆ ಪಕ್ಷದಿಂದ ಬೆಂಬಲ ನೀಡುವ ಸಂಬಂಧ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಜತೆ ರಹಸ್ಯ ಸಭೆ ನಡೆಸಿರುವ ಬಗ್ಗೆ ವರದಿಯಾಗಿದೆ.

ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ನಡೆದ ಪ್ರಮುಖ ನಾಯಕರ ಜತೆ ಸಭೆ ಬಳಿಕ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಪರಸ್ಪರ ಚರ್ಚೆ ನಡೆಸಿದ್ದಾರೆ.

ಪಕ್ಷೇತರ ಅಭ್ಯರ್ಥಿಗೆ ಬೆಂಬಲ‌ ಕೊಡುವ ಬಗ್ಗೆ ತಮ್ಮನ್ನು ಸಂಪರ್ಕಿಸದೆ ತಮ್ಮ ಗಮನಕ್ಕೂ ತಾರದೆ ಕೇವಲ ಜೆಡಿಎಸ್ ನಾಯಕರು ಹಾಗೂ ಪಕ್ಷದ ಡಿ.ಕೆ.ಶಿವಕುಮಾರ್ ಜತೆ ಮಾತ್ರವೇ ಚರ್ಚೆ ಮಾಡಿದ್ದಾರೆಂದು ಪರಸ್ಪರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಜೊತೆ ಚರ್ಚಿಸದೇ ನಿರ್ಧಾರ ತೆಗೆದುಕೊಂಡಿರುವುದರಿಂದ ಪಕ್ಷೇತರ ಅಭ್ಯರ್ಥಿಗೆ ಬೆಂಬಲಿಸುವುದು ಸರಿಯಲ್ಲ. ಒಂದು ವೇಳೆ ಬೆಂಬಲಿಸಿದರೆ ಮುಖಭಂಗ ಅನುಭವಿಸಬೇಕಾಗಿ ಬಂದು, ಅದು ಪಕ್ಷದ ಮೇಲೆ ಪರಿಣಾಮ ಬೀರಬಹುದೆಂದು ಎಂಬ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

ತಮಗೆ ಗೊತ್ತಿಲ್ಲದಂತೆಯೇ ಶಿವಕುಮಾರ್ ಹಾಗೂ ಎಚ್.ಡಿ.ಕುಮಾರಸ್ವಾಮಿ ಆಟ ಆಡಿದ್ದಾರೆಂದು ಕುಪಿತಗೊಂಡಿರುವ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್,‌ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡದಿದ್ದರೆ ಬಿಜೆಪಿಯ ಲಕ್ಷ್ಮಣ್  ಸವದಿಗೆ ಗೆಲುವು ಸುಲಭವಾಗಬಹುದು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 392ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು; ಮಾರಕಾಸ್ತ್ರ ಹಿಡಿದು ಅಬ್ಬರಿಸುತ್ತಿದ್ದ ರೌಡಿಶೀಟರ್ ಹೆಡೆಮುರಿ ಕಟ್ಟಿದ ಬೆಂಗಳೂರಿನ ಪೊಲೀಸರು

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!