ವಿಶ್ವೇಶ್ವರ ಹೆಗಡೆ ಕಾಗೇರಿ 
ರಾಜಕೀಯ

ವಿಧಾನಸಭೆಯಲ್ಲಿ ಮಾರ್ಚ್ 2 ಮತ್ತು 3 ರಂದು ಸಂವಿಧಾನ ಕುರಿತ ವಿಶೇಷ ಚರ್ಚೆಗೆ ಅವಕಾಶ- ಕಾಗೇರಿ

ರಾಜ್ಯ ವಿಧಾನಸಭೆಯಲ್ಲಿ ಮಾರ್ಚ್ 2 ಮತ್ತು 3 ರಂದು ಭಾರತ ಸಂವಿಧಾನದ ಆಶಯಗಳು, ಸ್ವರೂಪ ಹಾಗೂ ಸಾಕಾರ ಕುರಿತಂತೆ ಎರಡು ದಿನಗಳ ವಿಶೇಷ ಚರ್ಚೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ವಿಧಾನಸಭಾ ಸ್ಪೀಖರ್ ವಿಶ್ವೇಶರ ಹೆಗಡೆ ಕಾಗೇರಿ ಹೇಳಿದ್ದಾರೆ

ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಮಾರ್ಚ್ 2 ಮತ್ತು 3 ರಂದು ಭಾರತ ಸಂವಿಧಾನದ ಆಶಯಗಳು, ಸ್ವರೂಪ ಹಾಗೂ ಸಾಕಾರ ಕುರಿತಂತೆ ಎರಡು ದಿನಗಳ ವಿಶೇಷ ಚರ್ಚೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ವಿಧಾನಸಭಾ ಸ್ಪೀಖರ್ ವಿಶ್ವೇಶರ ಹೆಗಡೆ ಕಾಗೇರಿ ಹೇಳಿದ್ದಾರೆ

ಭಾರತ ಸಂವಿಧಾನ ಅಂಗೀಕಾರ ಮತ್ತು ಅನುಷ್ಠಾನಗೊಂಡು ಏಳು ದಶಕಗಳು ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಎರಡು ದಿನಗಳ ರಾಜಕೀಯೇತರ ಈ ವಿಶೇಷ ಚರ್ಚೆಗೆ ಅವಕಾಶ ಕಲ್ಪಿಸಲಾಗಿದೆ. ಸದನ ಕಲಾಪ ಸಲಹಾ ಸಮಿತಿಯಲ್ಲಿ ಕಾರ್ಯಕ್ರಮದ ರೂಪುರೇಷಗಳ ಬಗ್ಗೆ ಚರ್ಚಿಸಿ, ರಚನಾತ್ಮಕ ಚರ್ಚೆಗೆ ನೀಲನಕ್ಷೆ ಸಿದ್ದಪಡಿಸಲಾಗುವುದು ಎಂದು ಅವರು ತಿಳಿಸಿದರು

ಫೆಬ್ರವರಿ 17 ರಂದು ರಾಜ್ಯಪಾಲ ವಜೂಭಾಯಿ ವಾಲ ಅವರು ಉಭಯ ಸಧನಗಳ ಸದಸ್ಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ, ಅದೇ ದಿನ ಅಪರಾಹ್ನ ಅಗಲಿದ ಚೇತನಗಳಿಗೆ ಶ್ರದ್ದಾಂಜಲಿ ಅರ್ಪಿಸಲಾಗುವುದು. ನಂತರ ರಾಜ್ಯಪಾಲರ ಭಾಷಣ ಕುರಿತು ಚರ್ಚೆ ಹಾಗೂ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯ ಕಾರ್ಯಕ್ರಮಗಳು ಫೆಬ್ರವರಿ 20 ರ ವರೆಗೆ ನಡೆಯಲಿದೆ ಎಂದರು.  

ತದನಂತರ ಮಾರ್ಚ್ 2 ರಂದು  ಮರು ಸಮಾವೇಶಗೊಳ್ಳಲಿರುವ ಅಧಿವೇಶನದಲ್ಲಿ ಮಾರ್ಚ್ 5 ರಂದು ಹಣಕಾಸು ಖಾತೆಯನ್ನು ಹೊತ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2020-21 ನೇ ಸಾಲಿನ ಆಯವ್ಯಯ ಮಂಡಿಸಲಿದ್ದಾರೆ. ಕರ್ನಾಟಕ ಲೋಕಾಯುಕ್ತ ವಿಧೇಯಕವೂ ಒಳಗೊಂಡಂತೆ ಆರು ವಿಧೇಯಕಗಳು ಸದನದಲ್ಲಿ ಮಂಡಿಸಿ ಪರಿಶೀಲನೆಗೆ ಒಳಪಡಿಸಲು ಯೋಜಿಸಲಾಗಿದೆ. ಮಾರ್ಚ್ 31 ರ ವರೆಗೆ ಅಧಿವೇಶನ ನಡೆಯಲಿದೆ. ಇಪ್ಪತ್ತೈದು ದಿನಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ರಾಜ್ಯದ ಅಭಿವೃದ್ಧಿ ಕುರಿತ ಚರ್ಚೆಗೆ ವಿಪುಲ ಅವಕಾಶ ದೊರೆಯಲಿದೆ ಎಂದರು.

ಲೋಕಸಭೆ ಮತ್ತು ರಾಜ್ಯಸಭೆ ಮಾದರಿಯಲ್ಲಿಯೇ ಸದನ ನಡೆಯಬೇಕೆಂಬ ಹಿನ್ನೆಲೆಯಲ್ಲಿ ಖಾಸಗಿ ಮಾಧ್ಯಮಗಳ ಕ್ಯಾಮರಾಗಳಿಗೆ ಸದನದ ಅಂಗಳದಲ್ಲಿ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ಆದರೆ, ದೂರದರ್ಶನವು ಕಲಾಪವನ್ನು ಚಿತ್ರೀಕರಿಸಿ ಬ್ರಾಂಡ್‍ವಿಡ್ತ್ ಸಂಕೇತಗಳ ಮೂಲಕ ಖಾಸಗಿ ವಾಹಿನಿಗಳಿಗೆ ಕಲಾಪದ ಚಿತ್ರಣವನ್ನು ನೀಡಲಿದೆ ಎಂದು ಸಭಾಧ್ಯಕ್ಷರು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT