ಸಚಿವ ಆನಂದ್ ಸಿಂಗ್ 
ರಾಜಕೀಯ

ಸಚಿವ ಆನಂದ್ ಸಿಂಗ್ ಖಾತೆ ಬದಲಾವಣೆಗೆ ಹೆಚ್ಚಿದ ಒತ್ತಡ: ನಾಳೆ ಗವರ್ನರ್ ಭಾಷಣ ವೇಳೆ ಕಾಂಗ್ರೆಸ್ ಪ್ರತಿಭಟನೆ ಎಚ್ಚರಿಕೆ 

ಸಚಿವ ಆನಂದ್ ಸಿಂಗ್ ಅವರ ಖಾತೆಯನ್ನು ಬದಲಾಯಿಸಬೇಕೆಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು, ಈ ಬಗ್ಗೆ ನಾಳೆ ವಿಧಾನಮಂಡಲ ಅಧಿವೇಶನ ಉದ್ದೇಶಿಸಿ ಮಾತನಾಡಲಿರುವ ರಾಜ್ಯಪಾಲರ ಭಾಷಣ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಎಚ್ಚರಿಕೆ ನೀಡಿದೆ.

ಬೆಂಗಳೂರು: ಸಚಿವ ಆನಂದ್ ಸಿಂಗ್ ಅವರ ಖಾತೆಯನ್ನು ಬದಲಾಯಿಸಬೇಕೆಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು, ಈ ಬಗ್ಗೆ ನಾಳೆ ವಿಧಾನಮಂಡಲ ಅಧಿವೇಶನ ಉದ್ದೇಶಿಸಿ ಮಾತನಾಡಲಿರುವ ರಾಜ್ಯಪಾಲರ ಭಾಷಣ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಎಚ್ಚರಿಕೆ ನೀಡಿದೆ.


ಮುಖ್ಯಮಂತ್ರಿಗಳು ಕಾನೂನನ್ನು ಪಾಲಿಸಿ ಆನಂದ್ ಸಿಂಗ್ ಅವರನ್ನು ಅರಣ್ಯ ಖಾತೆ ಸಚಿವ ಹುದ್ದೆಯಿಂದ ಬದಲಾಯಿಸಬೇಕು. ಆನಂದ್ ಸಿಂಗ್ ಅವರು ಅದೇ ಖಾತೆಯಲ್ಲಿ ಮುಂದುವರಿದರೆ ಕಾಂಗ್ರೆಸ್ ಈ ವಿಚಾರವನ್ನು ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪ ಮಾಡಲಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಹೆಚ್ ಕೆ ಪಾಟೀಲ್ ತಿಳಿಸಿದ್ದಾರೆ. 


15ಕ್ಕೂ ಹೆಚ್ಚು ಕೇಸುಗಳನ್ನು ಎದುರಿಸುತ್ತಿರುವ ಆನಂದ್ ಸಿಂಗ್ ಅವರನ್ನು ಅರಣ್ಯ ಖಾತೆಯಿಂದ ಬದಲಾಯಿಸಬೇಕೆಂದು ವಿರೋಧ ಪಕ್ಷದ ನಾಯಕರು ಸೇರಿದಂತೆ ಸಮಾಜದ ವಿವಿಧ ವರ್ಗಗಳಿಂದ ಸಿಎಂ ಮೇಲೆ ಒತ್ತಡ ಹೆಚ್ಚಾಗುತ್ತಿದೆ. 


ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಸಚಿವ ಆನಂದ್ ಸಿಂಗ್, ನನ್ನ ವಿರುದ್ಧ ಅರಣ್ಯ ಕಾಯ್ದೆಯಡಿ ಯಾವುದೇ ಕೇಸುಗಳು ನಿಖರವಾಗಿ ದಾಖಲಾಗಿಲ್ಲ ಮತ್ತು ಮುಖ್ಯಮಂತ್ರಿಗಳು ಬಯಸಿದರೆ ಖಾತೆ ಬದಲಾವಣೆಗೆ ನಾನು ಸಿದ್ದನಿದ್ದೇನೆ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ