ವೇಣುಗೋಪಾಲ್ 
ರಾಜಕೀಯ

ಯಾರನ್ನೋ ರಕ್ಷಿಸಲು ಪಕ್ಷವನ್ನು ಶೂನ್ಯ ಸ್ಥಿತಿಯಲ್ಲಿಡುವುದು ಎಷ್ಟು ಸರಿ: ವೇಣುಗೋಪಾಲ್‍ಗೆ ಕ್ಲಾಸ್!

ರಾಜ್ಯ ಕಾಂಗ್ರೆಸ್ ನಾಯಕತ್ವದ ಗೊಂದಲ ನಿವಾರಿಸುವಲ್ಲಿ ವಿಳಂಬ ಮಾಡುತ್ತಿರುವುದಕ್ಕೆ ಹೈಕಮಾಂಡ್ ಮೇಲೆ ರಾಜ್ಯ ಹಿರಿಯ ಕಾಂಗ್ರೆಸ್ ನಾಯಕರು ಅಸಮಾಧಾನ ಹೊರ ಹಾಕಿದ್ದಾರೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕತ್ವದ ಗೊಂದಲ ನಿವಾರಿಸುವಲ್ಲಿ ವಿಳಂಬ ಮಾಡುತ್ತಿರುವುದಕ್ಕೆ ಹೈಕಮಾಂಡ್ ಮೇಲೆ ರಾಜ್ಯ ಹಿರಿಯ ಕಾಂಗ್ರೆಸ್ ನಾಯಕರು ಅಸಮಾಧಾನ ಹೊರ ಹಾಕಿದ್ದಾರೆ.

ಮಾಜಿ ಸಚಿವ ಎಚ್.ಕೆ. ಪಾಟೀಲ್ ನೇರವಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಭೇಟಿ ಮಾಡಿ ಕೆಪಿಸಿಸಿ ಅಧ್ಯಕ್ಷರ ನೇಮಕ ವಿಳಂಬಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯದಲ್ಲಿ ಅನೇಕ ಘಟನೆಗಳು ನಡೆಯುತ್ತಿದ್ದು, ಸಿಎಎ ವಿರುದ್ಧ ಸಾರ್ವಜನಿಕರು ಬೀದಿಗಿಳಿದು ಹೋರಾಟ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಪಕ್ಷ ನಾಯಕತ್ವ ಇಲ್ಲದೇ ಇರುವುದು ಸಾರ್ವಜನಿಕರಿಗೆ ಪಕ್ಷದ ಮೇಲೆ ವಿಶ್ವಾಸ ಮೂಡದಂತಾಗಿದೆ ಎಂದು ಹಿರಿಯ ನಾಯಕರು ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಮಾಜಿ ಸಚಿವ ಎಚ್.ಕೆ. ಪಾಟೀಲ್ ಇತ್ತೀಚೆಗೆ ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ನೇರವಾಗಿ ಭೇಟಿ ಮಾಡಿ ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡದೇ ಮಹತ್ವದ ಹುದ್ದೆಯಲ್ಲಿ ಖಾಲಿ ಇಟ್ಟುಕೊಂಡು ವಿಳಂಬ ನೀತಿ ಅನುಸರಿಸುತ್ತಿರುವ ಹೈಕಮಾಂಡ್ ನಡೆಯ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಆಡಳಿತಾತ್ಮಕವಾಗಿ ವೈಫ‌ಲ್ಯ ಕಂಡಿದ್ದು, ಪೊಲೀಸ್‌ ವ್ಯವಸ್ಥೆ ದುರ್ಬಳಕೆ ಮಾಡಿ ಕೊಳ್ಳುತ್ತಿದೆ. ಸಿಎಎ ವಿರುದ್ಧ ಸಾರ್ವ ಜನಿಕರು ಹೋರಾಟ ಮಾಡುತ್ತಿದ್ದು, ವಿಶೇಷವಾಗಿ ಅಲ್ಪ ಸಂಖ್ಯಾತ ಸಮುದಾಯದವರು ಬೀದಿ ಗಿಳಿದು ಹೋರಾಟ ಮಾಡುತ್ತಿದ್ದು, ಪಕ್ಷ ಅವರ ಬೆಂಬಲಕ್ಕೆ ನಿಲ್ಲದಿರುವುದು ಆ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಯಾರನ್ನೋ ರಕ್ಷಿಸಲು ಪಕ್ಷವನ್ನು ಶೂನ್ಯ ಸ್ಥಿತಿಯಲ್ಲಿಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ ಎನ್ನಲಾಗುತ್ತಿದೆ.

ಲೋಕಸಭೆ ಚುನಾವಣೆಯ ನಂತರ ಕಾರಣವಿಲ್ಲದೇ ಪಕ್ಷದ ಪದಾಧಿಕಾರಿಗಳನ್ನು ತೆಗೆದು ಹಾಕಲಾಗಿದ್ದು ಕಳೆದ ಎರಡು ತಿಂಗಳಿನಿಂದ ಅಧ್ಯಕ್ಷರಿಲ್ಲದೇ ಪಕ್ಷ ಸಂಘಟಿತ ಹೋರಾಟ ನಡೆಸಲು ಸಾಧ್ಯವಾಗದಂತಾಗಿದೆ. ಸೂಕ್ತ ಕಾರಣ ಇಲ್ಲದೇ ವಿಳಂಬ ಮಾಡುವುದರಿಂದ ಪಕ್ಷಕ್ಕೆ ನಷ್ಟವಾಗಲಿದ್ದು, ಈ ಬಗ್ಗೆ ಹೈಕಮಾಂಡ್‌ ಶೀಘ್ರ ತೀರ್ಮಾನ ಕೈಗೊಳ್ಳಬೇಕು ಎಂದು ಎಚ್‌.ಕೆ. ಪಾಟೀಲ್‌ ವೇಣುಗೋಪಾಲ್‌ ಅವರಿಗೆ ಆಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಏಷ್ಯನ್ ಗೇಮ್ಸ್ 2026 ಫೈನಲ್: ಅಭಿಷೇಕ್ ಶರ್ಮಾ, ತಿಲಕ್ ವರ್ಮಾ ಭರ್ಜರಿ ಅರ್ಧ ಶತಕ, ಪಾಕ್ ಗೆಲ್ಲಲು 212 ರನ್ ಗಳ ಗುರಿ ನೀಡಿದ ಭಾರತ!

'ಅವನು ಆಡಿದ್ರೂ, ಆಡದಿದ್ದರೂ ಏನೂ ವ್ಯತ್ಯಾಸವಾಗಲ್ಲ’: ಭಾರತದ ಯುವ ಆಟಗಾರನ ಕುರಿತು ಕಡ್ಡಿ ಮುರಿದಂತೆ ಹೇಳಿದ Ajinkya Rahane!

Flydubai ಕಾಕ್‌ಪಿಟ್ ದಾಳಿ: ಸಹ ಪೈಲಟ್ ಗುರುತು ಬಹಿರಂಗ