ಸಂಗ್ರಹ ಚಿತ್ರ 
ರಾಜಕೀಯ

ಸಿದ್ದರಾಮಯ್ಯ ಊಸರವಳ್ಳಿ: ಯಾವ ಸಮಯಕ್ಕೆ ಯಾವ ಬಣ್ಣ ಅವರಿಗೇ ಗೊತ್ತಿಲ್ಲ; ಬಿಸಿ ಪಾಟೀಲ್

ಕೇವಲ ವಿಪಕ್ಷ ನಾಯಕ ಸ್ಥಾನಕ್ಕೆ ಸೀಮಿತವಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಊಸರವಳ್ಳಿ ವ್ಯಕ್ತಿತ್ವದವರು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಾಗ್ದಾಳಿ ನಡೆಸಿದರು.

ಗಂಗಾವತಿ: ಕೇವಲ ವಿಪಕ್ಷ ನಾಯಕ ಸ್ಥಾನಕ್ಕೆ ಸೀಮಿತವಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಊಸರವಳ್ಳಿ ವ್ಯಕ್ತಿತ್ವದವರು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಾಗ್ದಾಳಿ ನಡೆಸಿದರು.

ನಗರದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನಂದ್ ಸಿಂಗ್ ಕಾಂಗ್ರೆಸ್ ನಲ್ಲಿ ಇದ್ದಾಗ ಯಾವುದೇ ಆರೋಪ ಮಾಡುತ್ತಿರಲಿಲ್ಲ. ಆದರೆ ಬಿಜೆಪಿ ಪಕ್ಷಕ್ಕೆ ಅವರು ಬರುತ್ತಿದ್ದಂತೆಯೇ ಗಣಿ ಹಗರಣ ಎಂದು ಖ್ಯಾತೆ ತೆಗೆಯುತ್ತಿದ್ದಾರೆ ಎಂದು ಹೇಳಿದರು.

ಊಸರವಳ್ಳಿ ಕೇವಲ ತನ್ನ ಜೀವ ರಕ್ಷಣೆಗೆ ಬಣ್ಣ ಬದಲಿಸುತ್ತದೆ. ಆದರೆ ಸಿದ್ದರಾಮಯ್ಯ ಹಗಲು ಒಂದು ರೀತಿ ಸಂಜೆ ಒಂದು ರೀತಿ ಬಣ್ಣ ಬದಲಿಸುವ ಮೂಲಕ ತಮ್ಮ ನಿಜ ಬಣ್ಣ ಬಯಲು ಮಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಕತೆ ಮುಗಿದ ಅಧ್ಯಾಯ ಎಂದ ಪಾಟೀಲ್,  17 ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಬರುವ ಸಾಧ್ಯತೆ ಇದೆ ಎಂದು ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪಾಟೀಲ್,  ಆಳ್ವಾ ಯಾರು?. ಸಧ್ಯ ಇರುವ ಕಾಂಗ್ರೆಸ್ ಶಾಸಕರನ್ನು  ಉಳಿಸಿಕೊಂಡರೆ ಸಾಕು. ಮೊದಲು ಈ ಬಗ್ಗೆ ಕಾಂಗ್ರೆಸ್ ಗಮನ ಹರಿಸಬೇಕು ಎಂದು ಪಾಟೀಲ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT