ದತ್ತಾತ್ರೇಯ ಪಾಟೀಲ್‌ ರೇವೂರ್‌ ಮತ್ತು ಯಡಿಯೂರಪ್ಪ 
ರಾಜಕೀಯ

ರೇವೂರಗೆ ಮಂತ್ರಿಸ್ಥಾನ ಕೊಡದಿದ್ರೆ 10 ಶಾಸಕರ ರಾಜೀನಾಮೆ: ಸಿಎಂಗೆ ಸ್ವಾಮೀಜಿ ಧಮ್ಕಿ

ಮುರುಗೇಶ ನಿರಾಣಿಗೆ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಲಿಂಗಾಯತ ಸ್ವಾಮೀಜಿ ವಚನನಾಂದ ಸ್ವಾಮೀಜಿ ಆವಾಜ್ ಹಾಕಿದ್ದ ಪ್ರಕರಣ ಜನಮಾನಸದಿಂದ ಮರೆಯಾಗುವ ಮುನ್ನವೇ ಮತ್ತೊಬ್ಬ ಸ್ವಾಮೀಜಿ ಸಿಎಂ ಗೆ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು:  ಮುರುಗೇಶ ನಿರಾಣಿಗೆ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಲಿಂಗಾಯತ ಸ್ವಾಮೀಜಿ ವಚನನಾಂದ ಸ್ವಾಮೀಜಿ ಆವಾಜ್ ಹಾಕಿದ್ದ ಪ್ರಕರಣ ಜನಮಾನಸದಿಂದ ಮರೆಯಾಗುವ ಮುನ್ನವೇ ಮತ್ತೊಬ್ಬ ಸ್ವಾಮೀಜಿ ಸಿಎಂ ಗೆ ಎಚ್ಚರಿಕೆ ನೀಡಿದ್ದಾರೆ.

ಮುಂದಿನ ವರ್ಷದ ಒಳಗಾಗಿ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ್‌ ರೇವೂರ್‌ಗೆ (ಅಪ್ಪುಗೌಡ) ಸಚಿವ ಸ್ಥಾನ ನೀಡದೇ ಹೋದ್ರೆ 10 ಶಾಸಕರಿಂದ ರಾಜೀನಾಮೆ ಕೊಡಿಸುವಷ್ಟು ತಾಕತ್ತು ತಮ್ಮ ಬಳಿ ಇದೆ ಎಂದು ಶ್ರೀಶೈಲ ಸಾರಂಗ ಮಠದ ಡಾ ಸಾರಂಗಧರ ದೇಶೀಕೇಂದ್ರ ಸ್ವಾಮೀಜಿ   ನೇರವಾಗಿ ಸಿಎಂ ಯಡಿಯೂರಪ್ಪನವರಿಗೇ ಎಚ್ಚರಿಕೆ ನೀಡಿದ್ದಾರೆ.

ಕಲಬುರಗಿ ಲೋಕಸಭೆ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿದ್ದ ಉಮೇಶ್ ಜಾಧವ್ ಗೆಲುವಿಗೆ ರೇವೂರ್ ಕಾರಣರಾಗಿದ್ದರು. ಆ ವೇಳೆ ಜಾದವ್ ಗೆದ್ದರೇ  ಮಂತ್ರಿ ಸ್ಥಾನ ನೀಡುವ ಭರವಸೆ ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ.  ಮೊದಲ ಹಂತದ ಹಾಗೂ ಎರಡನೇ ಹಂತದಲ್ಲಿ ಸಂಪುಟ ವಿಸ್ತರಣೆ ವೇಳೆ ತಮ್ಮ ಹೆಸರು ಇರಲಿದೆ ಎಂದು ರೇವೂರ ವಿಶ್ವಾಸ ಹೊಂದಿದ್ದರು. ಆದರೆ ಬಜೆಟ್ ಅಧಿವೇಶನದ ನಂತರ ನಡೆಯುವ ವಿಸ್ತರಣೆಯಲ್ಲೂ ತಮ್ಮ ಹೆಸರು ಇಲ್ಲ, ಹೀಗಾಗಿ ಸ್ವಾಮೀಜಿ ಮೊರೆ ಹೋಗಿದ್ದಾರೆ.

"ಉತ್ತರ ಮತ್ತು ಹೈದರಾಬಾದ್-ಕರ್ನಾಟಕ ಪ್ರದೇಶಗಳ ಅನೇಕ ಶಾಸಕರು ಅನೇಕ ಬಾರಿ ಚುನಾವಣೆಯಲ್ಲಿ ಗೆದ್ದಿದ್ದಾರೆ ಮತ್ತು ಬಹಳ ಪ್ರಭಾವಶಾಲಿಯಾಗಿದ್ದಾರೆ, ಹೀಗಿದ್ದರೂ ಅವರಿಗೆ ಕ್ಯಾಬಿನೆಟ್ ಸ್ಥಾನಗಳನ್ನು ನಿರಾಕರಿಸಲಾಗಿದೆ.  ಹೀಗಾಗಿ ಹಲವರು ತೀವ್ರ ಹತಾಶೆಗೊಳಗಾಗಿದ್ದಾರೆ. 

ಯಡಿಯೂರಪ್ಪ ಸಂಪುಟದಲ್ಲಿ 28 ಸಚಿವರಿದ್ದು,  ಅದರಲ್ಲಿ ಒಂಬತ್ತು ಮಂದಿ ಲಿಂಗಾಯತ ಶಾಸಕರಿದ್ದಾರೆ. ಹೆಚ್ಚಿನ ಮಂದಿ ಲಿಂಗಾಯತ ಶಾಸಕರು ಪ್ರತಿನಿಧಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

ಪಂಜಾಬ್: ಫೇಸ್‌ಬುಕ್ ಲೈವ್‌ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)