ರಾಜಕೀಯ

ರಾಮನಗರದ ಹೆಸರು ಬದಲಾವಣೆ ವಿರುದ್ಧ ಹೋರಾಟ ಅನೀವಾರ್ಯ-ಕುಮಾರಸ್ವಾಮಿ

Nagaraja AB

ಬೆಂಗಳೂರು: ರಾಮನಗರದ ಹೆಸರನ್ನು ನವ ಬೆಂಗಳೂರೆಂದು ಬದಲಾಯಿಸುವ ಸರ್ಕಾರದ ಪ್ರಸ್ತಾಪಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಬಿಜೆಪಿ ಸರ್ಕಾರದ ವಿರುದ್ಧ ಸರಣಿ ಟ್ವಿಟ್ ಮೂಲಕ ಕಟು ಎಚ್ಚರಿಕೆ ನೀಡಿದ್ದಾರೆ

ಸರಣಿ ಟ್ವೀಟ್ ಗಳ ಮೂಲಕ ಸರ್ಕಾರದ ವಿರುದ್ಧ ಹರಿ ಹಾಯ್ದಿರುವ ಎಚ್.ಡಿ.ಕುಮಾರಸ್ವಾಮಿ, ಪಕ್ಕದಲ್ಲೇ ಕಾವೇರಿ ನದಿ ಇದೆ. ಇಗ್ಗಲೂರಿನಲ್ಲಿ ದೇವೇಗೌಡ ಬ್ಯಾರೇಜ್ ಇದೆ. ಮಾಗಡಿಗೆ ಹೇಮೆ ಹರಿಯ ಲಿದ್ದಾಳೆ. ಚಿನ್ನದಂಥ ಭೂಮಿ ಇದೆ. ಮುಗ್ಧ ಜನರಿದ್ದಾರೆ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಈ ಸಂಪ ದ್ಭರಿತ ಭೂಮಿಯನ್ನು  ಕಿತ್ತುಕೊಂಡು ಬಂಡವಾಳ ಶಾಹಿಗಳಿಗೆ ಹಂಚಲು ಹೆಸರೊಂದು ಅಡ್ಡಿ ಇದೆ. ನನ್ನ ಮೇಲಿನ ರಾಜಕೀಯ ವೈಷಮ್ಯವೂ ಇದೆ ಎಂದು ಅವರು ಕಟು ಪದಗಳಿಂದ ಟೀಕಿಸಿದ್ದಾರೆ

ರಾಮನಗರ ಜಿಲ್ಲೆಯ ಸುತ್ತ ಸಪ್ತ ಬೆಟ್ಟಗಳಿವೆ. ಏಳು ಬೆಟ್ಟಗಳ ನಡುವೆ  ಇರುವುದೇ ರಾಮದೇವರ ಬೆಟ್ಟ. ಅದಕ್ಕಾಗಿಯೇ ರಾಮನಗರ ತಾಲೂಕು ಆಗಿದೆ. ರಾಮನ ಹೆಸರನ್ನೇ ಜಿಲ್ಲೆಗೂ ಇಟ್ಟಿದ್ದೇನೆ‌. ಇದನ್ನು ಮೀರಿ ಹೆಸರು ಬದಲಿಸಿದರೆ ಅದು ಬಿಜೆಪಿಯೇ ಪ್ರತಿಪಾದಿಸುವ ಸಿದ್ಧಾಂತಗಳಿಗೆ ಮಾಡಿದ ಅಪಚಾರ. ರಾಮನ ಹೆಸರಿಗೆ ಆಗುವ ಅಪಮಾನ ಎಂದಿದ್ದಾರೆ

ಈ ಜಿಲ್ಲೆ ಗಂಗರು ಆಳಿದ ನಾಡು.  ಬಾಲಗಂಗಾಧರನಾಥರ, ಶಿವಕುಮಾರ ಶ್ರೀಗಳ ಜನ್ಮಭೂಮಿ. ರಾಜ್ಯಕ್ಕೆ ನಾಲ್ಕು ಮುಖ್ಯಮಂತ್ರಿಗಳನ್ನು ಕೊಟ್ಟ ಶಕ್ತಿಸ್ಥಳ. ಇದೆ ಹೆಸರನ್ನು ಬೆಂಗಳೂರು ಎಂದು ಬದಲಿಸಿದರೆ ಜಿಲ್ಲೆಯ ಐತಿಹ್ಯ ಅಳಿಯಲಿದೆ.ಹೆಸರು ಬದಲಿಸುವ ನಿರ್ಧಾರದಿಂದ ಸರ್ಕಾರ ಕೂಡಲೇ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

SCROLL FOR NEXT