ರಾಜಕೀಯ

ಮೈಸೂರು ಪಾಲಿಕೆ ಮೇಯರ್ ಚುನಾವಣೆ: ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಮುಂದುವರಿಕೆ

Shilpa D

ಮೈಸೂರು: ಮೈಸೂರು ಮಹಾನಗರಪಾಲಿಕೆಯ ಮೇಯರ್- ಉಪಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ಬುಧವಾರ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸಭೆ ನಡೆಸಿವೆ.

ಅಧಿಕಾರ ಹಂಚಿಕೆ ಒಪ್ಪಂದದಂತೆ ಇದುವರೆಗೆ ಕಾಂಗ್ರೆಸ್ ನ ಪುಷ್ಪಲತಾ ಜಗನ್ನಾಥ್ ಮೇಯರ್ ಆಗಿದ್ದರು, ಅವರ ಒಂದು ವರ್ಷದ ಅವದಿ  ಪೂರೈಸಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಸದಸ್ಯರೊಬ್ಬರು ಮೇಯರ್ ಪಟ್ಟ ಅಲಂಕರಿಸಲಿದ್ದಾರೆ,.

ಮಾಜಿ ಸಿಎಂ ಸಿದ್ದರಾಮಯ್ಯ ನಿರ್ದೇಶನದಂತೆ ಕಾಂಗ್ರೆಸ್ ನ ಹಲವು ಸದಸ್ಯರು ಜೆಡಿಎಸ್ ಮುಖಂಜ ಸಾ.ರಾ ಮಹೇಶ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ,. ಮೇಯರ್ ಅಭ್ಯರ್ಥಿ ಆಯ್ಕೆ ಮಾಡಿದ ನಂತರ ತಮ್ಮ ಬೆಂಬಲ ನೀಡುವುದಾಗಿ ಜೆಡಿಎಸ್ ಗೆ ಭರವಸೆ ನೀಡಿದ್ದಾರೆ. 

ಈ ಸಂಬಂಧ ಸಾ.ರಾ ಮಹೇಶ್ ಸ್ಥಳೀಯ ನಾಯಕರನ್ನು ಸಂಪರ್ಕಿಸಿ ಹಾಗೂ ಕುಮಾರಸ್ವಾಮಿ ಅವರ ಜೊತೆ ಚರ್ಚಿಸಿ ಅಭ್ಯರ್ಥಿ ಆಯ್ಕೆ ಪ್ರಕಟಿಸಲಿದ್ದಾರೆ. ಜೊತೆಗೆ ಸ್ಥಾಯಿ ಸಮಿತಿಗಳ ಅದ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆಯೂ ಮಾಜಿ ಸಚಿಲವ ತನ್ವೀರ್ ಸೇಠ್ ವಿದೇಶದಿಂದ ವಾಪಸ್ ಬಂದ  ನಂತರ ಸಭೆ ನಡೆಸಿ ಚರ್ಚಿಸಲಿದ್ದಾರೆ.

SCROLL FOR NEXT