ಡಿ.ಕೆ ಶಿವಕುಮಾರ್ 
ರಾಜಕೀಯ

'ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ಬಿಜೆಪಿ ಪ್ರತಿಭಟನೆ ಕಂಡು ಗಡಗಡ ನಡುಗುತ್ತಿದ್ದೇನೆ'

ಬಿಜೆಪಿ ಪ್ರತಿಭಟನೆ ಕಂಡು ಗಡಗಡ ನಡುಗುತ್ತಿದ್ದೇನೆ ಎನ್ನುವ ಮೂಲಕ ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ಹಮ್ಮಿಕೊಂಡ ಕನಕಪುರ ಚಲೋ ಬಗ್ಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್​​ ವ್ಯಂಗ್ಯವಾಡಿದ್ದಾರೆ.

ಬೆಂಗಳೂರು: ಬಿಜೆಪಿ ಪ್ರತಿಭಟನೆ ಕಂಡು ಗಡಗಡ ನಡುಗುತ್ತಿದ್ದೇನೆ ಎನ್ನುವ ಮೂಲಕ ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ಹಮ್ಮಿಕೊಂಡ ಕನಕಪುರ ಚಲೋ ಬಗ್ಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್​​ ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರ ಜತೆ ಮಾತಾಡಿದ ಡಿಕೆಶಿವಕುಮಾರ್, ನಾನು ಬಿಜೆಪಿ ಪ್ರತಿಭಟನೆಯಿಂದ ನನಗೆ ನಡುಕ ಶುರುವಾಗಿದೆ. ಈಗಲೂ ನಡುಗುತ್ತಿದ್ದೇನೆ. ಅವರಿಗೆ ಹೆದರಿ ಮನೆಯಿಂದ ಹೊರಗಡೆ ಬಂದೆ  ಲೇವಡಿ ಮಾಡಿದ್ದಾರೆ.

ಮಾಗಡಿ ರಸ್ತೆಯಲ್ಲಿ ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಕ್ರೈಸ್ತರು 5 ಎಕರೆ ಜಮೀನು ನೀಡಿದ್ದಾರೆ. ರಾಜಕಾರಣ ಮಾಡಬೇಕೆಂದು ಬಿಜೆಪಿಗರು ಹೀಗೆ ಮಾಡುತ್ತಿದ್ದಾರೆ. ಅವರ ಬಳಿ ಅಧಿಕಾರ ಇದೆ ಮಾಡಲಿ. ಎಲ್ಲಿಂದ ಎಷ್ಟು ಜನ ಬಂದಿದ್ದಾರೆ ಎಂಬುದು ನನಗೆ ಗೊತ್ತಿದೆ. ಯಾರು ಜನರನ್ನು ಕರೆಸಿದ್ದಾರೆ ಎನ್ನುವುದು ನನ್ನ ಗಮನಕ್ಕೆ ಬಂದಿದೆ.

ಅವರಿಗೆ ಮಂತ್ರಿಯಾಗಬೇಕು ಎನ್ನುವ ಆಸೆಯಿಂದ ಹೀಗೆ ಮಾಡುತ್ತಿದ್ದಾರೆ ಮಾಡಲಿ ಬಿಡಿ ಎಂದು ಪರೋಕ್ಷವಾಗಿ ಮಾಜಿ ಶಾಸಕ ಸಿ.ಪಿ ಯೋಗೇಶ್ವರ್​​ ವಿರುದ್ಧ ಡಿಕೆಶಿ ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT