ಹೆಚ್. ವಿಶ್ವನಾಥ್ 
ರಾಜಕೀಯ

ಯಡಿಯೂರಪ್ಪ ನುಡಿದಂತೆ ನಡೆಯುವಂತ ನಾಯಕ: ಸಂಪುಟದಲ್ಲಿ ಸ್ಥಾನ ಖಚಿತ- ವಿಶ್ವನಾಥ್ 

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಾಲಿಗೆ ಮೇಲೆ ನಡೆಯುವಂತ ನಾಯಕ, ಅವರು ಹೇಳಿದ ಹಾಗೆ ನಡೆದುಕೊಳ್ಳಲಿದ್ದಾರೆ ಎಂದು ಮಾಜಿ ಶಾಸಕ  ಹೆಚ್ . ವಿಶ್ವನಾಥ್ ಹೇಳಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಾಲಿಗೆ ಮೇಲೆ ನಡೆಯುವಂತ ನಾಯಕ, ಅವರು ಹೇಳಿದ ಹಾಗೆ ನಡೆದುಕೊಳ್ಳಲಿದ್ದಾರೆ ಎಂದು ಮಾಜಿ ಶಾಸಕ  ಹೆಚ್ . ವಿಶ್ವನಾಥ್ ಹೇಳಿದ್ದಾರೆ.

ಮೈತ್ರಿ ಸರ್ಕಾರವನ್ನು ಪತನಗೊಳಿಸಿದ ಬಂಡಾಯ ಶಾಸಕರಲ್ಲಿ ಒಬ್ಬರಾಗಿದ ವಿಶ್ವನಾಥ್, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್. ಪಿ. ಮಂಜುನಾಥ್ ವಿರುದ್ಧ 39 ಸಾವಿರ ಮತಗಳ ಅಂತರದಿಂದ ಸೋತಿದ್ದರು.

ಯಡಿಯೂರಪ್ಪ ನೀಡಿರುವ ಮಾತಿನ ಮೇಲೆ ನನಗೆ ನಂಬಿಕೆ ಇದೆ. ಯಾವುದೇ ರೀತಿಯ ಅನುಮಾನ, ಅಥವಾ ಭಯ ಅಥವಾ ಭೀತಿ ಇಲ್ಲ. ಉಪ ಚುನಾವಣೆಯಲ್ಲಿ ಗೆದ್ದಿರುವ ಎಲ್ಲಾ 17 ಶಾಸಕರನ್ನು ಸಚಿವರನ್ನಾಗಿ ಮಾಡುತ್ತಾರೆ. ಅವರನ್ನು ನಾನು ನಂಬುತ್ತೇನೆ. ನಮ್ಮ ತ್ಯಾಗವಿಲ್ಲದೆ ಬಿಜೆಪಿ ಸರ್ಕಾರ ಹೇಗೆ ರಚನೆಯಾಗಲು ಸಾಧ್ಯವಿತ್ತು ಎಂದು ಪ್ರಶ್ನಿಸಿದರು?

ಜೂನ್ ತಿಂಗಳಲ್ಲಿ ವಿಧಾನಪರಿಷತ್ತಿನಲ್ಲಿ 12 ಸ್ಥಾನಗಳು ಖಾಲಿಯಾಗಲಿದ್ದು, ಎಂಟಿಬಿ ನಾಗರಾಜ್ ಜೊತೆಗೆ ತಮ್ಮನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡುವ ಭರವಸೆ ಇದೆ. ಉಪಚುನಾವಣೆಯಲ್ಲಿ ಗೆಲ್ಲಲಿ ಅಥವಾ ಸೋತಿದ್ದರೂ ಯಡಿಯೂರಪ್ಪ ನೀಡಿದ್ದ ಭರವಸೆಯಂತೆ ನಡೆಯುತ್ತಾರೆ ಎಂಬ ವಿಶ್ವಾಸ ಹೊಂದಿರುವುದಾಗಿ ವಿಶ್ವನಾಥ್ ತಿಳಿಸಿದರು. ವಿಶ್ವನಾಥ್, ನಾಗರಾಜ್ ಹಾಗೂ ಶಂಕರ್ ಕುರುಬ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸದಂತೆ ಯಡಿಯೂರಪ್ಪ ಹೇಳಿದ್ದರು. ಆದರೆ, ಅವರ ಮಾತು ಫಲಿತಾಂಶದ ನಂತರ ಮನವರಿಕೆಯಾಗಿದೆ. ಯಾವುದೇ ನಿಗಮ ಅಥವಾ ಮಂಡಳಿಯ ಅಧ್ಯಕ್ಷರಾಗಿ ನೇಮಕವಾಗುವುದಿಲ್ಲ, ಸದ್ಯದಲ್ಲಿಯೇ ಸಚಿವರಾಗಿರುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT