ಈಶ್ವರಪ್ಪ 
ರಾಜಕೀಯ

ಸಚಿವಾಕಾಂಕ್ಷಿಗಳ ಋಣ ನಮ್ಮ ಮೇಲಿದೆ, ಇನ್ನೆರಡು ದಿನಗಳಲ್ಲಿ ಈ  ಋಣ ತೀರಲಿದೆ: ಈಶ್ವರಪ್ಪ

ಸಚಿವ ಆಕಾಂಕ್ಷಿಗಳ ಋಣ ನಮ್ಮ ಮೇಲಿದೆ. ಅದನ್ನು ತೀರಿಸುವುದು ನಮ್ಮ ಕರ್ತವ್ಯ. ಅವರ ಋಣ ತೀರಿಸುವ ಕೆಲಸ ನಾವು ಮಾಡುತ್ತೇವೆ. ಅವರಿಂದಲೇ ನಮ್ಮ ಸರ್ಕಾರ ಬಂದಿದೆ.

ಮೈಸೂರು: ಸಚಿವ ಆಕಾಂಕ್ಷಿಗಳ ಋಣ  ನಮ್ಮ ಮೇಲಿದೆ. ಇನ್ನೆರಡು ದಿನದಲ್ಲಿ ಈ ಋಣ ತೀರಲಿದೆ ಎಂದು ಸಚಿವ ಕೆ. ಎಸ್ ಈಶ್ವರಪ್ಪ ಹೇಳಿದ್ದಾರೆ. 

ಮೈಸೂರಿನಲ್ಲಿ ಮಾತನಾಡಿದ ಅವರು, ಸಚಿವ ಆಕಾಂಕ್ಷಿಗಳ ಋಣ ನಮ್ಮ ಮೇಲಿದೆ. ಅದನ್ನು ತೀರಿಸುವುದು ನಮ್ಮ ಕರ್ತವ್ಯ. ಅವರ ಋಣ ತೀರಿಸುವ ಕೆಲಸ ನಾವು ಮಾಡುತ್ತೇವೆ. ಅವರಿಂದಲೇ ನಮ್ಮ ಸರ್ಕಾರ ಬಂದಿದೆ. ಅದು ಸಚಿವರನ್ನಾಗಿ ಮಾಡುವುದು ಅಥವಾ ಸ್ಥಾನ ಕೊಡುವುದಲ್ಲ. ಅವರ ಋಣವನ್ನು ನಾವು ತೀರಿಸಬೇಕಿದೆ ಅಷ್ಟೇ. ಇನ್ನು ಎರಡು ದಿನದಲ್ಲಿ ಅದು ಆಗಲಿದೆ ಎಂದು ಹೇಳಿದ್ದಾರೆ.

 ಅಮಿತ್ ಶಾ ರಾಜ್ಯ ಪ್ರವಾಸ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ವೇಳೆ ಏನು ಚರ್ಚೆ ಆಗಿದೆ ನನಗೆ ಮಾಹಿತಿ ಇಲ್ಲ. ನಿಮಗೆ ಇರುವಷ್ಟೇ ಮಾಹಿತಿ ನನಗಿದೆ. ಪೂರ್ಣ ಬಹುಮತ ಬಾರದ ಕಾರಣ ಈ ಗೊಂದಲ ಉಂಟಾಗಿದೆ. ಆದಷ್ಟು ಬೇಗ ಪೂರ್ಣ ಪ್ರಮಾಣದ ಸಚಿವ ಸಂಪುಟ ಆಗಲಿದೆ ಎಂದಿದ್ದಾರೆ.

ಮಾಜಿ ಶಾಸಕ ಎಚ್. ವಿಶ್ವನಾಥ್ ಅವರಿಗೂ ಸೂಕ್ತ ಸ್ಥಾನಮಾನ ನೀಡಲಾಗುವುದು, ಈ  ಸಂಬಂಧ ಈಗಾಗಲೇ  ಚರ್ಚೆಗಳು ನಡೆದಿವೆ ಎಂದು ಹೇಳಿದ್ದಾರೆ. 

ಸಚಿವ ಸ್ಥಾನದ ಆಕಾಂಕ್ಷಿಗಳ ಬಗ್ಗೆ ಬಿಜೆಪಿ ನಾಯಕರ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಟೀಕೆ ಮಾಡುತ್ತಿರುವವರು ಬಾಯಿ ಮುಚ್ಚಿಕೊಂಡಿರಬೇಕು. ಅವರ ವಿರುದ್ಧ ಹಗುರವಾಗಿ ಮಾತನಾಡುವುದು ಸರಿಯಲ್ಲ. ಅವರಿಂದಲೇ ನಮ್ಮ ಸರ್ಕಾರ ಬಂದಿದೆ ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!