ಡಿಸಿಎಂ ಅಶ್ವತ್ಥ್ ನಾರಾಯಣ್ 
ರಾಜಕೀಯ

ಮಂಗಳೂರು ಬಾಂಬ್ ಪತ್ತೆ ಅಣುಕು ಪ್ರದರ್ಶನ ಎಂದ ಹೆಚ್'ಡಿಕೆ ವಿರುದ್ಧ ಡಿಸಿಎಂ ಅಶ್ವತ್ಥ್ ನಾರಾಯಣ್ ಕಿಡಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಅಣುಕು ಪ್ರದರ್ಶನ ಎಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. 

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಅಣುಕು ಪ್ರದರ್ಶನ ಎಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲಿಗೆ ಇದೆ ಎಂದು ಎನು ಬೇಕಾದರೂ ಮಾತನಾಡಬಹುದು ಎಂದು ಕುಮಾರಸ್ವಾಮಿ ಅಂದುಕೊಂಡಿದ್ದಾರೆ. ಆದರೆ, ಅವರು ಆಡುವ ಮಾತಿನ ಮೇಲೆ ಎಚ್ಚರಿಕೆ ಇರಬೇಕು. ಬಾಂಬ್ ಇಟ್ಟಿರುವ ವ್ಯಕ್ತಿ ಈ ಹಿಂದೆ ಹುಸಿ ಬಾಂಬ್ ಕರೆ ಮಾಡಿದ್ದ. ಈ ಬಾರಿ ತಾನೇ ಬಾಂಬ್ ಇಟ್ಟಿರುವುದಾಗಿ ಒಪ್ಪಿಕೊಂಡಿದ್ದಾರೆ. ಆ ಬಗ್ಗೆ ತನಿಖೆ ನಡೆಯುತ್ತಿದೆ. ಮಾಹಿತಿ ತಿಳಿದು ಕುಮಾರಸ್ವಾಮಿ ಮಾತನಾಡಲಿ ಎಂದು ಹೇಳಿದ್ದಾರೆ. 

ಇನ್ನು ಮುಂದೆ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾಗುವ ಕೆಲ ಸಂಘಟನೆಗಳ ನಿಷೇಧಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ಸಮಾಜಘಾತುಕ ಸಂಘಟನೆಗಳನ್ನು ನಿಷೇಧಿಸುತ್ತೇನೆ. ಈಗಾಗಲೇ ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಲಾಗಿದೆ. ಇಂತಹ ಸಂಘಟನಗೆಳನ್ನು ಬೆಳೆಯಲು ಬಿಡುವುದು ಅತ್ಯಂತ ಅಪಾಯಕಾರಿ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

SCROLL FOR NEXT