ಎಚ್ ಡಿ ಕುಮಾರಸ್ವಾಮಿ 
ರಾಜಕೀಯ

ಒಕ್ಕಲಿಗರು ಅಧಿಕಾರಕ್ಕೆ ಬರುವುದನ್ನು, ಹೋರಾಟ ಮಾಡುವುದನ್ನು ಬಿಜೆಪಿ ಸಹಿಸುವುದಿಲ್ಲ: ಕುಮಾರಸ್ವಾಮಿ ತಿರುಗೇಟು

ಒಕ್ಕಲಿಗ ಎಂಬ ಹೆಸರನ್ನು ಕುಮಾರಸ್ವಾಮಿ ಬಳಸಬಾರದು. ಸಮಾಜವನ್ನು ಒಡೆಯುವ, ಕೆಲಸವನ್ನು ಎಚ್‌ಡಿಕೆ ಮಾಡುತ್ತಿದ್ದಾರೆ ಎಂಬ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ಬೆಂಗಳೂರು: ಒಕ್ಕಲಿಗ ಎಂಬ ಹೆಸರನ್ನು ಕುಮಾರಸ್ವಾಮಿ ಬಳಸಬಾರದು. ಸಮಾಜವನ್ನು ಒಡೆಯುವ, ಕೆಲಸವನ್ನು ಎಚ್‌ಡಿಕೆ ಮಾಡುತ್ತಿದ್ದಾರೆ ಎಂಬ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ವಿರುದ್ಧ ಟೀಕಾಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಎಚ್  ಡಿ ಕುಮಾರಸ್ವಾಮಿ ಒಂದು ಸಮುದಾಯದ  ನಾಯಕನನ್ನು ಟೀಕಿಸಲು ಅದೇ ಸಮುದಾಯದ ವ್ಯಕ್ತಿಯನ್ನು ಬಳಸಿಕೊಳ್ಳುವುದು ಬಿಜೆಪಿಯ ಸೋಂಕು ಎಂದು ಹರಿಹಾಯ್ದಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ತನ್ನ ಧರ್ಮ, ಸಮಾಜದ ಬಗ್ಗೆ ಅಪಾರ ಗೌರವ ಇಟ್ಟುಕೊಂಡೂ ಇತರ ಧರ್ಮ, ಸಮಾಜಗಳ ಮೇಲೆ ಅಷ್ಟೇ ಗೌರವ ಹೊಂದುವುದು ನಾನು ನಂಬಿದ ಜಾತ್ಯತೀತತೆ. ಇದರಲ್ಲಿ ಒಕ್ಕಲಿಗ ಅಸ್ಮಿತೆಯೂ ಇದೆ, ಇತರ ಸಮಾಜದ ಮೇಲಿನ ಗೌರವವೂ ಇದೆ. ನಿತ್ಯ ಅನ್ಯಧರ್ಮಗಳ‌ ಮೇಲೆ ದಾಳಿ ಮಾಡುವ, ಜಾತಿಗಳನ್ನು ಮತಕ್ಕಾಗಿ ಬಳಸಿಕೊಳ್ಳುವ ನಿಮ್ಮ ಪಕ್ಷದವರಿಂದ ಪಾಠ ಹೇಳಿಸಿಕೊಳ್ಳಬೇಕಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಒಕ್ಕಲಿಗರ ಜೀನ್ ಕರ್ನಾಟಕದ ಮಣ್ಣಿನಲ್ಲಿದೆ ಎಂದು ಹೇಳಿದರೆ ಆಶ್ವತ್ಥ ನಾರಾಯಣ ಮತ್ತು ಬಿಜೆಪಿಗೆ ಏಕೆ ಕಣ್ಣು ಉರಿ? ನಿಮ್ಮ ಜೀನ್ ಪಾಕಿಸ್ತಾನದಲ್ಲಿದೆ ಎಂಬ ಮರುಕವೇ? ನಿಮ್ಮ ಸಿದ್ಧಾಂತ ಪ್ರತಿಪಾದಕರ ಜೀನ್ 'ನಾಜಿ' ಮೂಲದ್ದು ಎಂಬ ಬೇಸರವೇ? ಈ ಮಣ್ಣಿನವರಾದ 'ನಾವು' ನಮ್ಮ ಅಸ್ಮಿತೆ ಬಗ್ಗೆ ಮಾತಾಡುತ್ತೇವೆ. ತಡೆಯಲು ಬಿಜೆಪಿಗೆ ಸಾಧ್ಯವೇ? ಎಂದು ಅವರು ಸವಾಲು ಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT