ನಳಿನ್ ಕುಮಾರ್ ಕಟೀಲ್ 
ರಾಜಕೀಯ

ಅಧಿಕಾರವಿಲ್ಲದೆ ಕುಮಾರಸ್ವಾಮಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ- ಕಟೀಲ್ 

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಧಿಕಾರವಿಲ್ಲದೆ ಮಾನಸಿಕ ಸ್ಥಿಮಿತ ಕಳೆದುಕೊಂಡು ಪ್ರಚಾರಕ್ಕೋಸ್ಕರ ಮನಬಂದಂತೆ ಮಾತನಾಡುತ್ತಿದ್ದಾರೆ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. 

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಧಿಕಾರವಿಲ್ಲದೆ ಮಾನಸಿಕ ಸ್ಥಿಮಿತ ಕಳೆದುಕೊಂಡು ಪ್ರಚಾರಕ್ಕೋಸ್ಕರ ಮನಬಂದಂತೆ ಮಾತನಾಡುತ್ತಿದ್ದಾರೆ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. 

ಗಣರಾಜ್ಯೋತ್ಸವ ಅಂಗವಾಗಿ ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಡೆಯಿಂದ ತಮಗೆ ಜೀವ ಬೆದರಿಕೆ ಇದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನದಲ್ಲಿದ್ದ ಅವರು ಕೀಳುಮಟ್ಟದ ಮಾತುಗಳನ್ನಾಡುವುದು ಅವರಿಗೆ ಶೋಭೆ ತರುವಂತಹುದಲ್ಲ ಎಂದರು. 

ಸಚಿವ ಸಂಪುಟ ವಿಸ್ತರಣೆ ತೀರ್ಮಾನವನ್ನು ಮುಖ್ಯಮಂತ್ರಿಗಳು ತೆಗೆದುಕೊಳ್ಳುತ್ತಾರೆ. ಆದರೆ, ಗೊಂದಲವನ್ನು ಸೃಷ್ಟಿಸಲು ಕಾಂಗ್ರೆಸ್ ಹೊರಟಿದೆ. ಆದರೆ, ಕಾಂಗ್ರೆಸ್ ಪಕ್ಷಕ್ಕೆ ನಾವಿಕನೇ ಇಲ್ಲ. ಮೂರು ತಿಂಗಳಾದರೂ ಅಧ್ಯಕ್ಷರನ್ನು ಮಾಡಲು ಸಾಧ್ಯವಾಗಿಲ್ಲ ಎಂದು ವ್ಯಂಗ್ಯವಾಡಿದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳಿ ಧರ್ ರಾವ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮತ್ತಿತರರು  ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!