ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಕುಮಾರಸ್ವಾಮಿಯವರು ಊರಿಗೆಲ್ಲಾ ಬೆದರಿಕೆ ಹಾಕಬಹುದು, ಅವರಿಗೆ ಬೆದರಿಕೆ ಹಾಕಲು ಸಾಧ್ಯವಾ?

ಮಾಜಿ ಸಿಎಂ ಕುಮಾರಸ್ವಾಮಿಯವರು ಊರಿಗೆಲ್ಲಾ ಬೆದರಿಕೆ ಹಾಕಬಹುದು ಕೊಲೆ ಬೆದರಿಕೆ ಹಾಕಬಹುದು ಅವರಿಗೆ ಯಾರಾದರೂ ಬೆದರಿಕೆ ಹಾಕಲು ಸಾಧ್ಯನಾ? ಇದೊಂದು  ಸುಳ್ಳು ಸುದ್ದಿ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿಯವರು ಊರಿಗೆಲ್ಲಾ ಬೆದರಿಕೆ ಹಾಕಬಹುದು ಕೊಲೆ ಬೆದರಿಕೆ ಹಾಕಬಹುದು ಅವರಿಗೆ ಯಾರಾದರೂ ಬೆದರಿಕೆ ಹಾಕಲು ಸಾಧ್ಯನಾ? ಇದೊಂದು  ಸುಳ್ಳು ಸುದ್ದಿ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅಶೋಕ್, ಯಾರಾದರೂ ಕುಮಾರಸ್ವಾಮಿಗೆ ಬೆದರಿಕೆ ಹಾಕಲು ಸಾಧ್ಯನಾ ಎಂದು ಪ್ರಶ್ನಿಸಿದ್ದಾರೆ. ಅವರಿಗೆ ಬೆದರಿಕೆ ಬಂದರೆ ಕಾನೂನಿದೆ ಪೊಲೀಸರಿದ್ದಾರೆ. ಅವರು ಸಿಎಂ ಆಗಿದ್ದವರು, ಯಾರಿಗೆ ದೂರು ನೀಡಬೇಕು ಎಂಬುವುದು ಅವರಿಗೆ ಗೊತ್ತಿದೆ ಎಂದು ತಿಳಿಸಿದ್ದಾರೆ.

ಬೆದರಿಕೆ ಕುರಿತಾಗಿ ಅಗತ್ಯ ಮಾಹಿತಿಯೊಂದಿಗೆ ಪೊಲೀಸರಿಗೆ ದೂರು ಕೊಟ್ಟರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಯಾವ ನಂಬರ್‌ನಿಂದ ಅವರಿಗೆ ಕರೆ ಬಂದಿದೆ, ಯಾವ ದೇಶದಿಂದ ಕರೆ ಮಾಡಲಾಗಿದೆ ಎಂಬ ಮಾಹಿತಿ ನೀಡಿದರೆ ಸರ್ಕಾರ ತನಿಖೆ ನಡೆಸಿ ಸೂಕ್ತ ಭದ್ರತೆಯನ್ನು ನೀಡಲಿದೆ ಎಂದರು.

ನಿಜಗುಣಾನಂದ ಸ್ವಾಮೀಜಿ, ಎಚ್‌ ಡಿ ಕುಮಾರಸ್ವಾಮಿ ಸೇರಿದಂತೆ 15 ಮಂದಿ ಗಣ್ಯರಿಗೆ ಪತ್ರದ ಮೂಲಕ ಕೊಲೆ ಬೆದರಿಕೆ ಬಂದಿದೆ. ನಿಜಗುಣಾನಂದ ಸ್ವಾಮೀಜಿ ಆಶ್ರಮಕ್ಕೆ ಅನಾಮಧೇಯ ಪತ್ರವೊಂದು ಶುಕ್ರವಾರ ಬಂದಿತ್ತು. ಪತ್ರದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 111ಕ್ಕೆ ಏರಿಕೆ, ಹಲವರಿಗೆ ಗಾಯ

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ರೈತರ ನ್ಯಾಯಕ್ಕಾಗಿ ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ..!

ಬರ ಪರಿಹಾರಕ್ಕೆ ಕೇಂದ್ರದಿಂದ ಇನ್ನೂ ಉತ್ತರ ಬಂದಿಲ್ಲ; ಅಗತ್ಯವಿದ್ದರೆ ನ್ಯಾಯಾಲಯದ ಮೊರೆ: DCM ಡಾ. ಪರಮೇಶ್ವರ್‌

JDS ಪಾದಯಾತ್ರೆಯಲ್ಲಿ ರೈತರಿಲ್ಲ, ಪಕ್ಷದ ಕಾರ್ಯಕರ್ತರ ಕರೆತಂದಿದ್ದಾರೆ; ನಿಖಿಲ್‌ ರಾಜಕೀಯ ಭವಿಷ್ಯಕ್ಕಾಗಿ ಹೋರಾಟ: ಡಿಕೆ ಶಿವಕುಮಾರ್‌ ವ್ಯಂಗ್ಯ