ಯಡಿಯೂರಪ್ಪ 
ರಾಜಕೀಯ

ಬಿಎಸ್ ವೈ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ, ಫೆಬ್ರವರಿ 5ರೊಳಗೆ ನೂತನ ಶಾಸಕರಿಗೆ ಮಂತ್ರಿಗಿರಿ ಖಚಿತ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಈ ತಿಂಗಳಾಂತ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಮಾಡೇ ಮಾಡುತ್ತಾರೆ ಅಂತ ಅನ್ಕೊಂಡಿರೋರಿಗೆ ಈಗ ನಿರಾಶೆಯಾಗಿದ್ದು, ಫೆಬ್ರುವರಿ 5ರೊಳಗೆ ಸಂಪುಟ...

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಈ ತಿಂಗಳಾಂತ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಮಾಡೇ ಮಾಡುತ್ತಾರೆ ಅಂತ ಅನ್ಕೊಂಡಿರೋರಿಗೆ ಈಗ ನಿರಾಶೆಯಾಗಿದ್ದು, ಫೆಬ್ರುವರಿ 5ರೊಳಗೆ ಸಂಪುಟ ವಿಸ್ತರಣೆಯಾಗುವುದು ಬಹುತೇಕ ಖಚಿತ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಮಂಗಳವಾರ ಹೇಳಿದ್ದಾರೆ.

ಸಿಎಂ ಯಡಿಯೂರಪ್ಪ ಅವರ ತಲೆಯಲ್ಲಿ ಏನು ಓಡುತ್ತಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಆದರೆ ಒಂದಂತು ಖಚಿತ, ಅವರು ಭರವಸೆ ನೀಡಿದ ಎಲ್ಲರಿಗೂ ಸಚಿವ ಸ್ಥಾನ ನೀಡುತ್ತಾರೆ ಎಂದು ರಾಜ್ಯ ಬಿಜೆಪಿ ವಕ್ತಾರ ಜಿ ಮಧುಸೂಧನ್ ಅವರು ತಿಳಿಸಿದ್ದಾರೆ.

'ಫೆಬ್ರವರಿ 5ರೊಳಗೆ ಸಿಎಂ ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆ ಮಾಡುವುದು ಖಚಿತ. ಕೆಲವರು ಈ ತಿಂಗಳ ಅಂತ್ಯಕ್ಕೆ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳುತ್ತಿದ್ದಾರೆ. ಆದರೆ ಈ ತಿಂಗಳು ಮುಗಿತಾ ಬರುತ್ತಿದೆ. ನೋಡೋಣ ಎನಾಗುತ್ತೆ' ಎಂದಿದ್ದಾರೆ.

ಮಧುಸೂಧನ್ ಅವರ ಪ್ರಕಾರ, ಉಪ ಚುನಾವಣೆಯಲ್ಲಿ ಗೆದ್ದ 11 ಶಾಸಕರಿಗೆ ಸಚಿವ ಸ್ಥಾನ ನೀಡುವುದು ಖಚಿತ ಮತ್ತು ಕೆಲವು ಬಿಜೆಪಿ ಹಿರಿಯ ನಾಯಕರಿಗೂ ಸಚಿವ ಸ್ಥಾನ ನೀಡಬಹುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್