ರಾಜಕೀಯ

ಬಿಜೆಪಿ ನಾಯಕರು ಮಾತ್ರವಲ್ಲ, ಸಂಪುಟ ವಿಸ್ತರಣೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ ಕಾಂಗ್ರೆಸ್ಸಿಗರು !

Shilpa D

ಬೆಂಗಳೂರು: ಸಂಪುಟ ವಿಸ್ತರಣೆ ಯಾವಾಗ ನಡೆಯುತ್ತದೆ ಎಂದು ಕೇವಲ ಬಿಜೆಪಿ ನಾಯಕರು ಮಾತ್ರ ಉಸಿರು ಬಿಗಿ ಹಿಡಿದು ಕಾಯುತ್ತಿಲ್ಲ, ಕಾಂಗ್ರೆಸ್ ನಾಯಕರ ಕಣ್ಣು ಕೂಡ ವಿಸ್ತರಣೆ ಮೇಲಿದೆ. 

ಮುಖ್ಯಮಂತ್ರಿ ಯಡಿಯೂರಪ್ಪ ಪಕ್ಷದಲ್ಲಿ ಯಾರನ್ನೂ ನಿಭಾಯಿಸಲು ಸಾಧ್ಯವಾಗದ ಹಂತಕ್ಕೆ ತಲುಪಿದ್ದಾರೆ. ಒಮ್ಮೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದರೆ ಇದು ಇಡೀ ರಾಜ್ಯದ ಜನರಿಗೆ ಗೊತ್ತಾಗಲಿದೆ. ಅಲ್ಲದೆ, ಸಂಪುಟ ವಿಸ್ತರಣೆ ನಂತರ ಯಾರು ಸಿಡಿಯಲಿದ್ದಾರೆ? ಯಾರು ತಣ್ಣಗಾಗುತ್ತಾರೆ? ಎಂಬುದೆಲ್ಲವೂ ಬಯಲಾಗಲಿದೆ ಎಂದು ವ್ಯಂಗ್ಯವಾಡಿದ್ದಾರೆ.

“ಬಿಜೆಪಿಯಲ್ಲಿ ಈಗ ಯಾರನ್ನೂ ಸಮಾಧಾನಪಡಿಸಲು ಸಾಧ್ಯವಿಲ್ಲ. ಒಂದು ಬಾರಿ ಸಂಪುಟ ವಿಸ್ತರಣೆಯಾದರೆ ಬಿಜೆಪಿ ಒಳಗಿನ ಬಿಕ್ಕಟ್ಟು ಇಡೀ ರಾಜ್ಯದ ಜನರಿಗೆ ಗೊತ್ತಾಗಲಿದೆ..

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಯಾದ ನವ ಬೆಂಗಳೂರು ಯೋಜನೆಯನ್ನು ಪ್ರಸ್ತುತ ಬಿಜೆಪಿ ಸರ್ಕಾರ ಹಿಂಪಡೆದ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, “ಜನಪರ ಕೆಲಸಗಳನ್ನು ತಡೆಯುವುದು ಸರಿಯಲ್ಲ. 

ಬೇರೆ ಪಕ್ಷ ಅಥವಾ ಸರ್ಕಾರದ ಮೇಲೆ ಕೋಪ ಇರಬಹುದು. ಯೋಜನೆಗೂ ಬೇಕಾದರೆ ಬೇರೆ ಹೆಸರನ್ನು ಇಟ್ಟುಕೊಳ್ಳಲಿ. ಆದರೆ, ನಮ್ಮ ಮೇಲಿನ ಕೋಪವನ್ನು ಜನರ ಮೇಲೆ ತೋರಿಸುವುದು ಬೇಡ. ಕಾಂಗ್ರೆಸ್ ಅವಧಿಯಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸುವುದು ಬೇಡ” ಎಂದು ಮನವಿ ಮಾಡಿದ್ದಾರೆ.

ಸದ್ಯ ಹೈಕಮಾಂಡ್‌ ಹಾಗೂ ಕೇಂದ್ರದ ವರಿಷ್ಠರು ದೆಹಲಿ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆ. ಹೀಗಾಗಿ ರಾಜ್ಯ ರಾಜಕೀಯ ಬೆಳವಣಿಗೆಗಳ ಕಡೆ ಸ್ವಲ್ಪ ಗಮನ ಕಡಿಮೆಯಾಗಿದೆ. ಇದೀಗ ಮತ್ತೊಂದು ಬಾರಿ ಹೈಕಮಾಂಡ್ ಗೆ ಮನವಿ ಮಾಡುತ್ತೇವೆ.

ಪಕ್ಷದ ಮುಖಂಡರ ನಡುವೆ ಕೆಲವೊಂದು ಭಿನ್ನಾಭಿಪ್ರಾಯಗಳು ಇರಬಹುದು. ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಒಟ್ಟಾಗಿ ಹೋಗಬೇಕು. ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ನಮ್ಮ ಮನೆಯಲ್ಲೂ ಸಭೆಯನ್ನ ಮಾಡಿದ್ದೆ, ಆಗಲೂ ಭಿನ್ನಾಬಿಪ್ರಾಯವನ್ನು ಬದಿಗಿಟ್ಟು ಮುಂದುವರಿಯೋಣ ಎಂದಿದ್ದಕ್ಕೆ ಎಲ್ಲರೂ ಸಮ್ಮತಿ ಸೂಚಿಸಿದ್ದರು ಎಂದ ಅವರು ಕೂಡಲೇ ಕೆಪಿಸಿಸಿ ಅಧ್ಯಕ್ಷರ ನೇಮಕ ಆಗಬೇಕು ಹಾಗಾದರೆ ಎಲ್ಲರೂ ಒಟ್ಟಿಗೆ ಹೋಗಲು ಸಹಕಾರಿಯಾಗುತ್ತದೆ ಎಂದರು.

SCROLL FOR NEXT