ಬಿ ಶ್ರೀರಾಮುಲು 
ರಾಜಕೀಯ

ಗನ್ ಮ್ಯಾನ್ ವಿಷಯದಲ್ಲಿ ದ್ವೇಷದ ರಾಜಕಾರಣ‌ ಮಾಡುವುದಿಲ್ಲ: ಸಚಿವ ಶ್ರೀರಾಮುಲು

ಬಿಜೆಪಿ ಎಂದೂ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಮಾಜಿ ಸಚಿವ  ಡಿಕೆ ಶಿವಕುಮಾರ್ ಅವರಿಗೆ ಸಚಿವ ಬಿ. ಶ್ರೀರಾಮುಲು ತಿರುಗೇಟು ನೀಡಿದ್ದಾರೆ.

ಕಲಬುರಗಿ: ಬಿಜೆಪಿ ಎಂದೂ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಮಾಜಿ ಸಚಿವ  ಡಿಕೆ ಶಿವಕುಮಾರ್ ಅವರಿಗೆ ಸಚಿವ ಬಿ. ಶ್ರೀರಾಮುಲು ತಿರುಗೇಟು ನೀಡಿದ್ದಾರೆ. 

ಮಾಜಿ  ಸಚಿವರಿಗೆ ಸರ್ಕಾರದಿಂದ ಗನ್‌ಮ್ಯಾನ್ ವಾಪಾಸ್ ಪಡೆದು ಬಿಜೆಪಿ ದ್ವೇಷದ ರಾಜಕಾರಣ  ಮಾಡುತ್ತಿದೆ ಎಂಬ ಡಿ. ಕೆ. ಶಿವಕುಮಾರ್ ಹೇಳಿಕೆ‌ ಕುರಿತು ಕಲಬುರಗಿ ವಿಮಾನ ನಿಲ್ದಾಣದಲ್ಲಿ  ಪ್ರತಿಕ್ರಿಯಿಸಿದ ಸಚಿವರು, ಎಲ್ಲರನ್ನೂ ಸಮಾನವಾಗಿ ಕಾಣುವುದು ನಮ್ಮ ಪಕ್ಷದ ಸಿದ್ಧಾಂತ ಎಂದರು. 

ಸಚಿವ ಸಂಪುಟ ವಿಸ್ತರಣೆ ತಿಂಗಳ ಫೆಬ್ರವರಿ ಮೊದಲ ವಾರ ಅಥವಾ ಮಾರ್ಚ್ ಮೊದಲ ವಾರ ಆಗುತ್ತದೆ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧ ಎಂದು ತಿಳಿಸಿದರು. 

ಇನ್ನು  ಮುಂದೆ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಇಲ್ಲ ಎಂಬ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,‌ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ತಾವು ಬದ್ಧ. ರಮೇಶ್ ಜಾರಕಿಹೊಳಿ ಮತ್ತು ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಅವರು ತಮ್ಮ ಸಹೋದರನಿದ್ದಂತೆ ಎಂದರು.

ಅವರು ಮತ್ತು ತಾವು ಡಿಸಿಎಂ ಹುದ್ದೆಗೆ ಪಟ್ಟು ಹಿಡಿದಿರುವುದರಿಂದ ಈ ರೀತಿ ಆಗಿಲ್ಲ. ಅಲ್ಲದೇ, ಡಿಸಿಎಂ ಹುದ್ದೆ ತಮಗೆ ಬೇಕು‌ ಎಂಬ ಪಟ್ಟು ತಾವು ಹಿಡಿದಿಲ್ಲ ಎಂದರು.

ವಾಲ್ಮೀಕಿ ಸಮಾಜದ ಸ್ವಾಮೀಜಿಗಳು ಮತ್ತು ಸಮಾಜದ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆಸುತ್ತಿದ್ದಾರೆ. ಅವರು ಅಭಿಮಾನದಿಂದ ಅಭಿಯಾನ ನಡೆಸುತ್ತಿರಬಹುದು.  ಆದರೆ,‌ ತಾವು ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT