ಹರಿಪ್ರಸಾದ್ 
ರಾಜಕೀಯ

ಎಂಎಲ್‌ಸಿಗಳಾಗಿ ಬಿ.ಕೆ. ಹರಿಪ್ರಸಾದ್, ನಾಸೀರ್ ಅಹ್ಮದ್ ಪ್ರಮಾಣವಚನ ಸ್ವೀಕಾರ

ಮೇಲ್ಮನೆಗೆ ನೂತನ ಸದಸ್ಯರಾಗಿ ಆಯ್ಕೆಯಾಗಿದ್ದ ಇಬ್ಬರು ಕಾಂಗ್ರೆಸ್ ನಾಯಕರು ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಿದರು. 

ಬೆಂಗಳೂರು: ಮೇಲ್ಮನೆಗೆ ನೂತನ ಸದಸ್ಯರಾಗಿ ಆಯ್ಕೆಯಾಗಿದ್ದ ಇಬ್ಬರು ಕಾಂಗ್ರೆಸ್ ನಾಯಕರು ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಿದರು. 

ಕಾಂಗ್ರೆಸ್ ನಾಯಕರಾದ ಬಿ.ಕೆ.ಹರಿಪ್ರಸಾದ್ ಹಾಗೂ ನಾಸೀರ್ ಅಹ್ಮತ್ ಅವರು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 

ರಾಷ್ಟ್ರೀಯ ರಾಜಕೀಯದಲ್ಲಿ ದಶಕಗಳ ಬಳಿಕ, ಪಕ್ಷದ ಹೈಕಮಾಂಡ್ ನನ್ನನ್ನು ರಾಜ್ಯ ರಾಜಕಾರಣಕ್ಕೆ ತರಲು ನಿರ್ಧರಿಸಿದೆ. ಪ್ರಸ್ತುತ ರಾಜ್ಯಕೋವಿಡ್ -19 ನಂತಹ ಕಠಿಣ ಸವಾಲುಗಳನ್ನು ಎದುರಿಸುತ್ತಿದ್ದು, ಜನರು ಹೆಚ್ಚು ಚೇತರಿಸಿಕೊಳ್ಳಉವಂತೆ ಮಾಡಲು ನಾನು ಹೋರಾಟ ಮಾಡುತ್ತೇವೆಂದು ನಾಸೀರ್ ಅಹ್ಮದ್ ಅವರು ಹೇಳಿದ್ದಾರೆ. 

ನಾಲ್ಕು ಬಾರಿ ರಾಜ್ಯಸಭಾ ಸದಸ್ಯರಾಗಿರುವ ಮತ್ತು 17 ರಾಜ್ಯಗಳ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ಹರಿಪ್ರಸಾದ್ ಅವರು ಪರಿಷತ್ತಿನಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷದ ಬಲವನ್ನು ಹೆಚ್ಚಿಸುವ ನಿರೀಕ್ಷೆಯಿದೆ. 

ಎಸ್ ಬಂಗಾರಪ್ಪ ಅವರ ಸಂಪುಟದಲ್ಲಿ ಸಚಿವರಾಗಿದ್ದ ನಸೀರ್ ಅಹ್ಮದ್ ಅವರು, ಈ ಹಿಂದೆ ಮೂರು ಬಾರಿ ಪರಿಷತ್ ಸದಸ್ಯರಾಗಿದ್ದರು. 

ಬಿಜೆಪಿಯ ನೂತನ ಸದಸ್ಯರು ಇಂದು ಮಧ್ಯಾಹ್ನ 12.15ಕ್ಕೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆಂದು ಬಿಜೆಪಿ ಎಂಎಲ್ಸಿ ರವಿಕುಮಾರ್ ಅವರು ಹೇಳಿದ್ದಾರೆ. ಇನ್ನು ಜೆಡಿಎಸ್ ಸದಸ್ಯ ಇಂಚರ ಗೋವಿಂದ್ ರಾಜ್ ಅವರು ಮಾತನಾಡಿ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಲಭ್ಯತೆಗೆ ಅನುಗುಣವಾಗಿ ಜುಲೈ 20ರ ನಂತರ ಪ್ರಮಾಣ ವಚನ ಸ್ವೀಕರಿಸುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ