ಈಶ್ವರ ಖಂಡ್ರೆ 
ರಾಜಕೀಯ

'ಜಗಳ ಯಾಕೆ? ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ವಿಲೀನಗೊಳಿಸಿ'

ಕೊರೋನಾ ಸಂಬಂಧ ವಿಭಿನ್ನ ಮಾಹಿತಿ, ವೈರುಧ್ಯ ಹೇಳಿಕೆ, ಪದೇ ಪದೇ ನೀತಿ ನಿಯಮ ಸುಧಾರಣೆಗಳಿಂದ ಜನರು ಗೊಂದಲದಲ್ಲಿದ್ದಾರೆ, ಎರಡು ಇಲಾಖೆಗಳಲ್ಲಿ ಸಮನ್ವಯ ಕೊರತೆಯಿದೆ ಹೀಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ..

ಬೆಂಗಳೂರು: ಕೊರೋನಾ ಸಂಬಂಧ ವಿಭಿನ್ನ ಮಾಹಿತಿ, ವೈರುಧ್ಯ ಹೇಳಿಕೆ, ಪದೇ ಪದೇ ನೀತಿ ನಿಯಮ ಸುಧಾರಣೆಗಳಿಂದ ಜನರು ಗೊಂದಲದಲ್ಲಿದ್ದಾರೆ, ಎರಡು ಇಲಾಖೆಗಳಲ್ಲಿ ಸಮನ್ವಯ ಕೊರತೆಯಿದೆ ಹೀಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳನ್ನು ವಿಲೀನಗೊಳಿಸಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಕನಿಷ್ಠ ಕೋವಿಡ್ ಸಮಸ್ಯೆ ಮುಗಿಯುವ ವರೆಗೆ ಎರಡೂ ಇಲಾಖೆಯನ್ನ ವಿಲೀನಗೊಳಿಸಿ  ಒಂದೇ ನೇತೃತ್ವದ ಅಡಿಯಲ್ಲಿ ಆಡಳಿತ ನೀಡುವಂತೆ ಕಾಂಗ್ರೆಸ್ ಪಕ್ಷದ ವತಿಯಿಂದ ಒತ್ತಾಯಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಕೋವಿಡ್ ನಿಯಂತ್ರಣದಲ್ಲಿ ದಿನಕ್ಕೊಂದು ಆದೇಶ, ಘಳಿಗೆಗೆ ಒಂದು ಸತ್ತೋಲೆ, ಕ್ಷಣಕ್ಕೊಂದು ನಿರ್ಧಾರ ತೆಗೆದುಕೊಂಡು ನಿರ್ವಹಣೆಯಲ್ಲಿ ವಿಫಲವಾಗಿದೆ. ಇಲಾಖೆಗಳ ಸಮನ್ವಯದ ಕೊರತೆಯಿಂದ ಜನ ರಸ್ತೆಯಲ್ಲೇ ಪರದಾಡುವಂತಾಗಿದೆ ಎಂದು ಖಂಡ್ರೆ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನೂ ರಾಜ್ಯದ ಪ್ರತಿಯೊಬ್ಬ ನಾಗರಿಕರನ್ನು ಕೊರೊನಾ ವಿಮೆ ವ್ಯಾಪ್ತಿಗೆ ತರಲು ಸರಕಾರವೇ ವಿಮಾ ಪ್ರೀಮಿಯಂ ಭರಿಸಬೇಕು ಎಂದು ಮಾಜಿ ಸಚಿವ ಎಚ್‌.ಕೆ.ಪಾಟೀಲ್‌ ಆಗ್ರಹಿಸಿದ್ದಾರೆ.

ಈ ಸಂಬಂಧ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಪಾಟೀಲ್‌ '' ಸಕಾಲದಲ್ಲಿ ಸರಕಾರ ಸಮರ್ಪಕ ಕ್ರಮಗಳನ್ನು ಕೈಗೊಳ್ಳದಿದ್ದರೆ ಬೆಂಗಳೂರನ್ನು, ಕರ್ನಾಟಕವನ್ನು ಇಟಲಿ ಇಲ್ಲವೇ ನ್ಯೂಯಾರ್ಕ್‌ ರೀತಿ ಹೀನಾಯ ಸ್ಥಿತಿಗೆ ತಳ್ಳಿದ್ದಕ್ಕಾಗಿ ಜನರ ಆಕ್ರೋಶಕ್ಕೆ ಗುರಿಯಾಗುವಿರಿ,'' ಎಂದು ಎಚ್ಚರಿಸಿದ್ದಾರೆ.

''ಕೋವಿಡ್‌ನಿಂದ ಜನರನ್ನು ರಕ್ಷಿಸಲು ಸರಕಾರ ಮಾಡುತ್ತಿರುವ ಪ್ರಯತ್ನ ಏನೇನೂ ಸಾಲದು ಎಂಬಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಸೋಂಕಿತರನ್ನು ಆಸ್ಪತ್ರೆಗೆ ಕರೆದೊಯ್ಯುವ, ಗಂಭೀರ ರೋಗಿಗಳ ಕಾಳಜಿಯಲ್ಲಿ ಕೊರತೆ ಮತ್ತು ಇನ್ನೂ ಅನೇಕ ವಿಚಾರದಲ್ಲಿ ಪ್ರಮಾದಗಳು ನಡೆಯುತ್ತಿವೆ. ದೂರದೃಷ್ಟಿ ಮತ್ತು ಪರಿಣಾಮಕಾರಿ ಅಲ್ಲದ ಕ್ರಮಗಳು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿವೆ,'' ಎಂದು ದೂರಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT