ಕೊರೋನಾ ಸೋಂಕಿತ ರಾಜಕಾರಣಿಗಳು 
ರಾಜಕೀಯ

ಬೇಡ-ಬೇಡವೆಂದರೂ ಹಾರ, ಶಾಲು ಹಾಕುತ್ತಾರೆ; ನಮ್ಮ ಯಾತನೆ ಕೇಳುವವರು ಯಾರು?: ರಾಜಕಾರಣಿಗಳ ಅಳಲು

ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಸಕರು, ಸಚಿವರು ಸೇರಿದಂತೆ ಎಲ್ಲಾ ರಾಜಕಾರಣಿಗಳು ಮತ್ತು ಅಧಿಕಾರಿಗಳು ಕೋವಿದ್ ಪರೀಕ್ಷೆಗಾಗಿ ಮುಗಿ ಬೀಳುತ್ತಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಸಕರು, ಸಚಿವರು ಸೇರಿದಂತೆ ಎಲ್ಲಾ  ರಾಜಕಾರಣಿಗಳು ಮತ್ತು ಅಧಿಕಾರಿಗಳು ಕೋವಿದ್ ಪರೀಕ್ಷೆಗಾಗಿ ಮುಗಿ ಬೀಳುತ್ತಿದ್ದಾರೆ.

ರಾಜಕಾರಣಿಗಳು ಹೆಚ್ಚಿನ ಪ್ರಮಾಣದಲ್ಲಿ  ಜನರನ್ನು ಭೇಟಿ ಮಾಡುವ ಕಾರಣದಿಂದಾಗಿ ಅವರಿಗೆ ಕೊರೋನಾ ಸೋಂಕು ತಗಲುವ ಸಾಧ್ಯತೆಯಿದೆ, ಏಕೆಂದರೇ ಅವರು ವರ್ಕ್ ಫ್ರಮ್ ಹೋಮ್ ಮಾಡಲಾಗುವುದಿಲ್ಲ.

ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ಮಾಜಿ ಎಂಎಲ್ ಸಿ ಪುಟ್ಟಣ್ಣ, ಕುಣಿಗಲ್ ಶಾಸಕ ಎಚ್ ಡಿ ರಂಗನಾಥ್, ಎಂಕೆ ಪ್ರಾಣೇಶ್, ಜನಾರ್ದನ ಪೂಜಾರಿ ಸೇರಿ ಹಲವು ರಾಜಕಾರಣಿಗಳು ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ.

ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದಿಲ್ಲ, ಆ ನಿಯಮವನ್ನು ಅವರು ಪಾಲಿಸುವುದಿಲ್ಲ, ಎಷ್ಟು ಹೇಳಿದರೂ ಅರ್ಥ ಮಾಡಿಕೊಳ್ಳದೇ ಸೆಲ್ಫೀ ತೆಗೆದುಕೊಳ್ಳುವುದು, ಸಾಲು ಹೊದಿಸುವುದು ಹಾರ ಹಾಕುತ್ತಾರೆ, ಅವರಿಗೆ ಅರ್ಥ ಮಾಡಿಸುವುದು ಕಷ್ಟವಾಗುತ್ತದೆ ಎಂದು ಸಂಸದ ಸುಮಲತಾ ಅಂಬರೀಷ್ ತಿಳಿಸಿದ್ದಾರೆ,

ರಾಜಕಾರಣಿಗಳು ದಿನಕ್ಕೆ ಹಲವು ಮಂದಿಯನ್ನು ಭೇಟಿ ಮಾಡುತ್ತಾರೆ, ಬರುವಾಗ ಜನರು ಹಾರ, ಮೈಸೂರು ಪೇಟ, ಹಣ್ಣು ಹೂವು, ಪ್ರಸಾದ ತೀರ್ಥ ಮತ್ತು ಉಡುಗೊರೆಗಳನ್ನು ತರುತ್ತಾರೆ.

ಪ್ರತಿದಿನ ಮದುವೆ, ಗೃಹ ಪ್ರವೇಶ, ನಾಮಕರಣ ಮುಂತಾದ ಸಮಾರಂಭಗಳಿರುತ್ತವೆ ಜೊತೆಗೆ ಹಲವು ಅನೇಕ ಶಾಸಕಾಂಗ ಉಪಸಮಿತಿಗಳ ಸಭೆಗಳಿರುತ್ತವೆ, ಅವುಗಳಲ್ಲಿ ಭಾಗವಹಿಸಬೇಕು, ಹಾಗೂ ಹಾರ ಮತ್ತು ಶಾಲುಗಳನ್ನು ತರಬೇಡಿ ಎಂದು ಅವರು ಕೇಳುವುದಿಲ್ಲ ಎಂದು ಬಿಜೆಪಿ ಎಂಎಲ್ ಸಿ ರವಿ ಕುಮಾರ್ ಹೇಳಿದ್ದಾರೆ.

ಇನ್ನೂ ಶಾಸಕ ಯತೀಂದ್ರ ಸಿದ್ದರಾಮಯ್ಯತಮ್ಮ ಕ್ಷೇತ್ರದಲ್ಲಿನ ಹಲವು ಕಾಮಗಾರಿಗಳ ಪರಿಶೀಲನೆಗೆ ತೆರಳಿದ್ದೆ, ಅಲ್ಲಿಯ ಜನರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿ ಹೇಳುವಷ್ಟರಲ್ಲಿ ಸಾಕಾಗಿ ಹೋಯಿತು ಎಂದು ಹೇಳಿದ್ದಾರೆ.

ಕೊರೋನಾ ಸೂಕ್ಷ್ಮತೆಯನ್ನು ಅರಿತು ರಾಜಕಾರಣಿಗಳು ತಮ್ಮ ದೈನಂದಿನ ದಿನಚರಿಯಲ್ಲಿ ಕೆಲವೊಂದು ಮಾರ್ಪಾಡುಗಳನ್ನು ಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಬಿಎಲ್ ಶಂಕರ್ ಹೇಳಿದ್ದಾರೆ. ಶಾಸಕ ದಿನೇಶ್ ಗುಂಡೂರಾವ್ ಅವರ ಪಿಎ ಮತ್ತ ಅವರ ಸಹಾಯಕರಿಗೆ ಕೊರೋನಾ ಪಾಸಿಟಿವ್ ದೃಢವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT