ನಳಿನ್ ಕುಮಾರ್ ಕಟೀಲ್ 
ರಾಜಕೀಯ

'ಸದ್ಯದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಿದ್ರೆ ದೇವರಿಂದಲೂ ರಾಜ್ಯವನ್ನು ಉಳಿಸಲು ಸಾಧ್ಯವಾಗುತ್ತಿರಲಿಲ್ಲ'

ಈ ಸ್ಥಿತಿಯಲ್ಲಿ ಸಿದ್ದರಾಮಯ್ಯ ಏನಾದರು ಮುಖ್ಯಮಂತ್ರಿ ಆಗಿದ್ದರೆ ರಾಜ್ಯವನ್ನು ಆ ಭಗವಂತನಿಂದಲೂ ಉಳಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಕಿಡಿ ಕಾರಿದ್ದಾರೆ.

ಬೆಂಗಳೂರು: ಈ ಸ್ಥಿತಿಯಲ್ಲಿ ಸಿದ್ದರಾಮಯ್ಯ ಏನಾದರು ಮುಖ್ಯಮಂತ್ರಿ ಆಗಿದ್ದರೆ ರಾಜ್ಯವನ್ನು ಆ ಭಗವಂತನಿಂದಲೂ ಉಳಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಕಿಡಿ ಕಾರಿದ್ದಾರೆ.

ಕೋಲಾರಕ್ಕೆ ಭೇಟಿ ನೀಡಿ ಮಾತನಾಡಿದ ಅವರು ಭಗವಂತನ ಇಚ್ಛೆ ನಮ್ಮ ಮುಖ್ಯಮಂತ್ರಿ ಅವರ ಮೇಲೆ ಇರೋದರಿಂದ ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣ ಆಗುತ್ತಿದೆ. ಸಿದ್ದರಾಮಣ್ಣ ಮುಖ್ಯಮಂತ್ರಿ ಆಗಿದ್ರೆ  ರಾಜ್ಯವನ್ನು ಭಗವಂತನ ಕೈಯಲ್ಲೂ ಉಳಿಸೋಕೆ ಆಗ್ತಿರಲಿಲ್ಲ. ಬೇರೆ ಬೇರೆ ಕಡೆಗೆ ಹೋಗಿ ಇತಿಹಾಸ ಬರೆದವರು ಇವತ್ತು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ" ಎಂದು ಕಾಂಗ್ರೆಸ್ ಅವರ ಮೇಲೆ ಕಿಡಿಕಾರಿದರು.

ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಮಾಡುವಲ್ಲಿ ರಾಜ್ಯ ಬಿಜೆಪಿ ಸರ್ಕಾರ ಯಶಸ್ವಿಯಾಗಿದೆ. ವಿನಾಕಾರಣ ವಿರೋಧ  ಪಕ್ಷದವರು ಮೆಡಿಕಲ್‌ ಕಿಟ್‌ ಹಗರಣದಲ್ಲಿ ಸರ್ಕಾರ ಲೂಟಿ   ಹೊಡೆಯುತ್ತಿದೆ ಎಂದು ಬೊಬ್ಬೆ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಇಂತಹ ತುರ್ತು ಪರಿಸ್ಥಿತಿಯಲ್ಲಿ ಸಹಕಾರ ನೀಡದೆ ರಾಜಕೀಯ ಮಾಡುತ್ತಿದೆ. ಭ್ರಷ್ಟಾಚಾರದ ಬಗ್ಗೆ ಮಾತಾಡುವವರು ತಿಹಾರ್‌ ಜೈಲಿನಲ್ಲಿ ಏಕೆ ಕುಳಿತುಕೊಂಡಿದ್ದರು ಎಂದು ಛೇಡಿಸಿದರು. ಬಿಜೆಪಿ ವಿರೋಧ ಪಕ್ಷದಲ್ಲಿ ಇದ್ದಾಗ ತುರ್ತು ಸಂದರ್ಭಗಳಲ್ಲಿ ಸಹಕಾರ ನೀಡಿದೆ. ಆದರೆ ಇವರಿಗೆ ಅಂತಹ ಮನಸ್ಥಿತಿ ಇಲ್ಲದೇ ವೈಯಕ್ತಿಕ ಬೇಳೆ ಬೇಯಿಸಿಕೊಳ್ತಾ ಇದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ