ರಾಜಕೀಯ

ಭೂ ಸುಧಾರಣಾ ಕಾಯ್ದೆ: ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ

Manjula VN

ಬೆಂಗಳೂರು: ಕರ್ನಾಟಕ ರಾಜ್ಯ ಭೂ ಸುಧಾರಣಾ ಕಾಯ್ದೆ ಸುಗ್ರೀವಾಜ್ಞೆ ವಿರುದ್ಧ ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷ ನಿರ್ಧಾರ ಮಾಡಿದೆ ಎಂದು ತಿಳಿದುಬಂದಿದೆ. 

ಸುಗ್ರೀವಾಜ್ಞೆ ಮೂಲಕ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಸಂಘಟಿಸಲು ಮುಂದಾಗಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು, ನಿನ್ನೆಯಷ್ಟೇ ಮೊದಲ ಹಂತವಾಗಿ ಇಂದು ರೈತ ಸಂಘಟನೆಗಳ ಜೊತೆ ಸಮಾಲೋಚನೆ ನಡೆಸಿದರು. 

ಕಾಯ್ದೆ ಸುಧಾರಣೆ ವಿರುದ್ದ ಪ್ರತಿಭಟನೆ ನಡೆಸಲು ರೈತರು ಸಿದ್ಧರಿದ್ದಾರೆ. ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಯ ತಿದ್ದುಪಡಿಗಳ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ. ಆದರೆ ಅದಕ್ಕೂ ಮುನ್ನ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅಕ್ರಮಗಳ ವಿರುದ್ಧ ಪ್ರತಿಭಟಿಸುತ್ತೇವೆಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. 

ವೈದ್ಯಕೀಯ ಸಲಕರಣೆಯಲ್ಲಿ ಅಕ್ರಮ ನಡೆದಿರುವ ಆರೋಪಗಳನ್ನು ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಿರಾಕರಿಸಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು ಈ ಬಗ್ಗೆ ಶೀಘ್ರದಲ್ಲಿಯೇ ವಿವರಣೆ ನೀಡುತ್ತವೆಂದಿದ್ದರು.

SCROLL FOR NEXT