ಸಾಂದರ್ಭಿಕ ಚಿತ್ರ 
ರಾಜಕೀಯ

ಹಿರಿಯ ನಾಯಕರಿಂದ ನಿರ್ಲಕ್ಷ್ಯ: ಹೊಸ ಸಚಿವರಿಂದ ಬಿಜೆಪಿ ಕಾರ್ಯಕರ್ತರಿಗೆ ಇಮ್ಮಡಿ ಉತ್ಸಾಹ

ಬಿಜೆಪಿಯ ಕೆಲ ಹಿರಿಯ ನಾಯಕರು ಕಾರ್ಯಕರ್ತರ ಜೊತೆ ಸಾಮಾಜಿಕ ಅಂತರ ಕಾಯ್ಡುಕೊಳ್ಳುತ್ತಿದ್ದಾರೆ, ಆದರೆ ಹೊಸದಾಗಿ ಅಧಿಕಾರ ಸ್ವೀಕರಿಸಿರುವ ಸಚಿವರು ನಿಷ್ಠಾವಂತ ಕಾರ್ಯಕರ್ತರಿಗೆ ಆದರದ ಸ್ವಾಗತ ನೀಡುತ್ತಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ಬಿಜೆಪಿಗೆ ಬಂದಿರುವ ಹೊಸ ಸಚಿವರು ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸುತ್ತಿದ್ದಾರೆ.

ಬೆಂಗಳೂರು: ಬಿಜೆಪಿಯ ಕೆಲ ಹಿರಿಯ ನಾಯಕರು ಕಾರ್ಯಕರ್ತರ ಜೊತೆ ಸಾಮಾಜಿಕ ಅಂತರ ಕಾಯ್ಡುಕೊಳ್ಳುತ್ತಿದ್ದಾರೆ, ಆದರೆ ಹೊಸದಾಗಿ ಅಧಿಕಾರ ಸ್ವೀಕರಿಸಿರುವ ಸಚಿವರು ನಿಷ್ಠಾವಂತ ಕಾರ್ಯಕರ್ತರಿಗೆ ಆದರದ ಸ್ವಾಗತ ನೀಡುತ್ತಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ಬಿಜೆಪಿಗೆ ಬಂದಿರುವ ಹೊಸ ಸಚಿವರು ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸುತ್ತಿದ್ದಾರೆ.

ಪಕ್ಷದ ಸಲಹಾ ಮಂಡಳಿ ಮತ್ತು ಕಾರ್ಯದರ್ಶಿಗಳ ಹುದ್ದೆಗೆ ಕಾರ್ಯಕರ್ತರನ್ನು ನೇಮಕ ಮಾಡದ ಕಾರಣ ಕಾರ್ಯಕರ್ತರು ಹಿರಿಯ ಬಿಜೆಪಿ ಸಚಿವರಾದ ಬಸವರಾಜ ಬೊಮ್ಮಾಯಿ, ಅಶ್ವತ್ಥ  ನಾರಾಯಣ ಮತ್ತು ಸುರೇಶ್ ಕುಮಾರ್ ಅವರ ವಿರುದ್ಧ ಅಸಮಾಧಾನ ಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ವಂತ ಪಕ್ಷದ ಮುಖಂಡರಿಂದನಿರ್ಲಕ್ಷ್ಯಿಸಲ್ಪಟ್ಟ ಕಾರ್ಯಕರ್ತರನ್ನು ಬೇರೆ ಬೇರೆ ಪಕ್ಷಗಳಿಂದ ಬಂದಿರುವ ನಾಯಕರು ಪ್ರೀತಿ ಆದರ ತೋರುತ್ತಿದ್ದಾರೆ.  ಕುಂದು ಕೊರತೆ ಗಳನ್ನು ಆಲಿಸುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಡಾ.ಕೆ ಸುಧಾಕರ್, ಗೋಪಾಲಯ್ಯ, ಎಸ್ ಟಿ ಸೋಮಶೇಖರ್, ಮತ್ತು ಬೈರತಿ ಬಸವರಾಜ್ ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ಉತ್ಸಾಹ ತುಂಬುತ್ತಿದ್ದಾರೆ. ನಾವು ಬಿಜೆಪಿಯ ಒಂದು ಭಾಗವಾಗಿದ್ದೇವೆ,  ಕಾರ್ಯಕರ್ತರ ಸಮಸ್ಯೆಗೆ ಸ್ಪಂದಿಸುವುದು ನಮ್ಮ ಜವಾಬ್ದಾರಿ ಎಂದು ಬೈರತಿ ಬಸವರಾಜ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

SCROLL FOR NEXT