ಡಿಕೆಶಿವಕುಮಾರ್ ಮತ್ತು ಸಿದ್ದರಾಮಯ್ಯ 
ರಾಜಕೀಯ

ಸರ್ಕಾರ ಅನುಮತಿ ನೀಡದ ಹೊರತಾಗಿಯೂ ಡಿಕೆಶಿ ಪದಗ್ರಹಣ ಮಾಡಿಯೇ ತೀರುತ್ತೇವೆ: ಸಿದ್ದರಾಮಯ್ಯ

ಕೆಪಿಸಿಸಿ ನೂತನ ಅಧ್ಯಕ್ಷ ಪದಗ್ರಹಣ ಕಾರ್ಯಕ್ರಮಕ್ಕೆ ಬಿಜೆಪಿ ಸರ್ಕಾರ ಮತ್ತೆ ಅನುಮತಿ ನಿರಾಕರಿಸಿದ ಹಿನ್ನಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬಿಎಸ್ ವೈ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷ ಪದಗ್ರಹಣ ಕಾರ್ಯಕ್ರಮಕ್ಕೆ ಬಿಜೆಪಿ ಸರ್ಕಾರ ಮತ್ತೆ ಅನುಮತಿ ನಿರಾಕರಿಸಿದ ಹಿನ್ನಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬಿಎಸ್ ವೈ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸರ್ಕಾರ ಕ್ಷುಲ್ಲಕ ರಾಜಕೀಯ ಮಾಡುತ್ತಿದ್ದು, ಗೃಹ ಸಚಿವ ಅಮಿತ್ ಶಾಗಿಲ್ಲದ ನಿಯಮಗಳನ್ನು ಡಿಕೆ ಶಿವಕುಮಾರ್ ಅವರ ಮೇಲೆ ಹೇರುತ್ತಿದೆ ಎಂದು ಕಿಡಿಕಾರಿದ್ದಾರೆ.

'ಕೆಪಿಸಿಸಿಯ ನೂತನ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಮತ್ತೆ ಅನುಮತಿ ನಿರಾಕರಿಸಿರುವ ಸರ್ಕಾರದ ಕ್ರಮವನ್ನು ಖಂಡಿಸುತ್ತೇನೆ. ಇದು ರಾಜಕೀಯ ಪ್ರೇರಿತ ನಿರ್ಧಾರವಾಗಿದ್ದು, ಪ್ರತಿಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನವಾಗಿದೆ. ದೇಶದ ಗೃಹ ಸಚಿವರಾದ ಅಮಿತ್ ಶಾ  ಅವರು ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ವರ್ಚುವಲ್ ರ್ಯಾಲಿ ನಡೆಸುವಾಗ ಅನ್ವಯ ಆಗದ ನಿಯಮಗಳು ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಮಾತ್ರ ಅನ್ವಯ ಆಗುವುದು ಹೇಗೆ? ಸರ್ಕಾರ ಕೂಡಲೇ ಪದಗ್ರಹಣ ಸಮಾರಂಭಕ್ಕೆ ಅನುಮತಿ ನೀಡಬೇಕು. ಬಿಜೆಪಿಯವರು ಎಂತಹಾ ದಮನಕಾರಿ ಪ್ರವೃತ್ತಿ ತೋರಿಸಿದರೂ ನಾವು ಕಾರ್ಯಕ್ರಮ ಮಾಡುತ್ತೇವೆ. ನಾವು ಕಾನೂನು ಗೌರವಿಸುವವರು, ಕಾನೂನಿನ ಅಡಿಯಲ್ಲೇ ಕಾರ್ಯಕ್ರಮ ಮಾಡಲಿದ್ದೇವೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!