ರಾಜಕೀಯ

ಡಿಕೆ ಶಿವಕುಮಾರ್ ಭೇಟಿಯಾದ ಮುಸ್ಲಿಂ ನಿಯೋಗ: ಪರಿಷತ್ ನಲ್ಲಿ ಸ್ಥಾನ ನೀಡುವಂತೆ ಮನವಿ

Shilpa D

ಬೆಂಗಳೂರು: ಜೂನ್ 29ರಂದು ನಡೆಯಲಿರುವ ಮೇಲ್ಮನೆ ಚುನಾವಣೆಗೆ ಮುಸ್ಲಿಂ ಅಭ್ಯರ್ಥಿಯನ್ನು ಪರಿಗಣಿಸಬೇಕೆಂದು ಕೇಂದ್ರದ ಮಾಜಿ ಸಚಿವ ಹಾಗೂ ರಾಜ್ಯಸಭೆಯ ಮಾಜಿ ಉಪಸಭಾಪತಿ ಕೆ.ರೆಹಮಾನ್ ಖಾನ್ ನೇತೃತ್ವದ ಮುಸ್ಲಿಂ ಮುಖಂಡರ ನಿಯೋಗ ಗುರುವಾರ ರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು.

ನಿವೃತ್ತಿಯಾಗಲಿರುವ ಏಳು ಸ್ಥಾನಗಳ ಪೈಕಿ ಎರಡು ಸ್ಥಾನಗಳು ಕಾಂಗ್ರೆಸ್ ಪಾಲಾಗಲಿದ್ದು ,ಎರಡು ಸ್ಥಾನಗಳಲ್ಲಿ ಒಂದನ್ನು ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ನೀಡಬೇಕೆಂದು ನಿಯೋಗದಿಂದ ಮನವಿ ಸಲ್ಲಿಸಲಾಯಿತು.

ಮೇಲ್ಮನೆಗೆ ಸಲೀಂ ಅಹಮದ್, ನಾಸೀರ್ ಅಹಮದ್, ಅಬ್ದುಲ್ ಜಬ್ಬಾರ್, ಶಾಕೀರ್ ಸನದಿ ಆಕಾಂಕ್ಷಿಗಳಾಗಿದ್ದು, ನಾಸೀರ್ ಮತ್ತು
ಅಬ್ದುಲ್ ಜಬ್ಬಾರ್ ಮರು ಆಯ್ಕೆ ಬಯಸಿದ್ದಾರೆ.
 

SCROLL FOR NEXT