ನಾರಾಯಣಗೌಡ 
ರಾಜಕೀಯ

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ವಿಶ್ವನಾಥ್‌ ಕೂಡಾ ಕಾರಣ: 'ಹಳ್ಳಿ ಹಕ್ಕಿ' ಬೆಂಬಲಕ್ಕೆ ನಿಂತ ನಾರಾಯಣಗೌಡ

ವಿಧಾನ ಪರಿಷತ್‌ ಚುನಾವಣೆಯಲ್ಲಿ ಮಾಜಿ ಸಚಿವ ಎಚ್‌. ವಿಶ್ವನಾಥ್‌ ಅವರಿಗೆ ಟಿಕೆಟ್‌ ಖಚಿತ ಎಂದು ತೋಟಗಾರಿಕೆ ಸಚಿವ ನಾರಾಯಣಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಮಾಜಿ ಸಚಿವ ಎಚ್‌. ವಿಶ್ವನಾಥ್‌ ಅವರಿಗೆ ಟಿಕೆಟ್‌ ಖಚಿತ ಎಂದು ತೋಟಗಾರಿಕೆ ಸಚಿವ ನಾರಾಯಣಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ವಿಶ್ವನಾಥ್‌ ಕೂಡಾ ಕಾರಣರಾಗಿದ್ದು, ಕೊಟ್ಟ ಮಾತಿನಂತೆ ಬಿಜೆಪಿ ಹೈಕಮಾಂಡ್‌ ನಡೆದುಕೊಳ್ಳುವುದರಿಂದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಸ್ಪರ್ಧಿಸಲು ವಿಶ್ವನಾಥ್‌ ಅವರಿಗೆ ಬಿಜೆಪಿ ಟಿಕೆಟ್‌ ಸಿಗಲಿದೆ. 

ನಮ್ಮ ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಾಗಿರುವುದು ನಿಜ. ಹೀಗಾಗಿ ಹೈಕಮಾಂಡ್‌ ನಿರ್ಧಾರ ಮಾಡಲಿದೆ'' ಎಂದು ನಾರಾಯಣಗೌಡ ಹೇಳಿದರು.

ಆರ್.ಶಂಕರ್ ಅವರಿಗೆ ಪರಿಷತ್ ಚುನಾವಣೆ ಟಿಕೆಟ್ ನೀಡುವುದು ಗ್ಯಾರೆಂಟಿ ಎಂದು ಇತ್ತೀಚೆಗೆ ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದರು, ಅದರ ಬೆನ್ನಲ್ಲೇ ನಾರಾಯಣಗೌಡ ಈ ಹೇಳಿಕೆ ನೀಡಿದ್ದಾರೆ. ಇನ್ನೂ ಭೂ ಸುಧಾರಣಾ ಕಾಯಿದೆ ತಿದ್ದುಪಡಿ ಬಗ್ಗೆ ಪ್ರತಿಕ್ರಿಯಿಸಿದ ನಾರಾಯಣಗೌಡ ಈ ಕಾಯಿದೆಯಿಂದ  ರೈತರಿಗೆ ಅನುಕೂಲವಾಲಿದೆ ಎಂದು ಅಭಿಪ್ರಾಯಪಟ್ಟರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್