ಸಿದ್ದರಾಮಯ್ಯ,ಹೆಚ್ ವಿಶ್ವನಾಥ್ 
ರಾಜಕೀಯ

ವಿಶ್ವನಾಥ್ ಗೆ ಟಿಕೆಟ್ ತಪ್ಪಿಸಲು ನಾನೇನು ಬಿಜೆಪಿ ಹೈಕಮಾಂಡಾ? ಸಿದ್ದರಾಮಯ್ಯ 

ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರಿಗೆ ವಿಧಾನಪರಿಷತ್ ಚುನಾವಣೆಯ ಟಿಕೆಟ್ ತಪ್ಪಿಸಲು ನಾನು ಬಿಜೆಪಿ ಹೈಕಮಾಂಡಾ, ಅವನಿಗೆ ಬುದ್ದಿ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರು: ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರಿಗೆ ವಿಧಾನಪರಿಷತ್ ಚುನಾವಣೆಯ ಟಿಕೆಟ್ ತಪ್ಪಿಸಲು ನಾನು ಬಿಜೆಪಿ ಹೈಕಮಾಂಡಾ, ಅವನಿಗೆ ಬುದ್ದಿ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ.

 ಟಿಕೆಟ್ ಕೈ ತಪ್ಪಲು ಸಿದ್ದರಾಮಯ್ಯ, ಕುಮಾರಸ್ವಾಮಿ ಕಾರಣ ಎಂಬ ವಿಶ್ವನಾಥ್ ಅವರ ಮಾತುಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಿಜೆಪಿಗೂ ನಾನೇ ಹೈಕಮಾಂಡಾ, ಅವರಿಗೇನೂ ಬುದ್ದಿ ಇಲ್ಲವೇ ಎಂದು  ಪ್ರಶ್ನಿಸಿದರು.

ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಹೈಕಮಾಂಡ್ ನನ್ನ ಮತ್ತು ಡಿಕೆ ಶಿವಕುಮಾರ್ ಅವರ ಅಭಿಪ್ರಾಯ ಕೇಳಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಅಲ್ಲಿ ಅನುಭವಸ್ಥರು ಇರಬೇಕು. ಹಾಗಾಗಿ ಹಿರಿಯರನ್ನು ಪರಿಗಣಿಸಿದೆ.  ಬಿ.ಕೆ.ಹರಿಪ್ರಸಾದ್ ಹಾಗೂ ನಾಸೀರ್ ಅಹ್ಮದ್ ಇಬ್ಬರೂ ಒಮ್ಮತದ ಅಭ್ಯರ್ಥಿಗಳು ಎಂದು ಸಿದ್ದರಾಮಯ್ಯ ಹೇಳಿದರು. 

ಈ ಎರಡು ಸ್ಥಾನಗಳಿಗೆ ಸುಮಾರು 270ಅರ್ಜಿಗಳು ಬಂದಿದ್ದವು. ಆ ಎಲ್ಲವನ್ನೂ ಹೈ ಕಮಾಂಡ್ ಗೆ ಕಳುಹಿಸಲಾಗಿತ್ತು. ಅಂತಿಮವಾಗಿ ಹೈ ಕಮಾಂಡ್ ಈ ಇಬ್ಬರನ್ನು ಆಯ್ಕೆಮಾಡಿದೆ ಎಂದು ತಿಳಿಸಿದರು.

ಮತ್ತೊಂದೆಡೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ,  ಹೆಚ್.ವಿಶ್ವನಾಥ್ ಯಾವ ಸಂದರ್ಭದಲ್ಲಿ ಯಾವ ರೀತಿ ಹೇಳಿಕೆ ಕೊಡುತ್ತಾರೆಯೋ ಹೇಗೆಹೇಗೆ ನಡೆದುಕೊಳ್ಳುತ್ತಾರೆಯೋ ಯಾರಿಗೂ ಅರ್ಥಾಗುವುದಿಲ್ಲ. ಅವರು ಮೇಲ್ಮನೆ ಪ್ರವೇಶಿಸದಂತೆ ನಾನು ತಡೆಯಲು ಸಾಧ್ಯವೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. 

ಹಿರಿಯ ಅನುಭವಿ ರಾಜಕಾರಣಿ ವಿಶ್ವನಾಥ್. ಕುಮಾರಸ್ವಾಮಿಯಿಂದ ಟಿಕೆಟ್ ತಪ್ಪಿತು ಎಂದು ಅವರು ಯಾವ ಆಧಾರದ ಮೇಲೆ ಹೇಳಿಕೆ ನೀಡಿದ್ದಾರೋ ನನಗಂತೂ ಗೊತ್ತಿಲ್ಲ. ಬಿಜೆಪಿ ಪಕ್ಷದ ಮೇಲೂ ನಾನು ಪ್ರಭಾವ ಬೀರುತ್ತೇನೆ ಎಂದು ಅವರಿಗನಿಸಿದ್ದರೆ ವಿಶ್ವನಾಥ್ ಅವರಿಗೆ ಧನ್ಯವಾದ ಸಲ್ಲಿಸಲೇಬೇಕು ಎಂದು ವ್ಯಂಗ್ಯವಾಡಿದರು. 

ವಿಶ್ವನಾಥ್ ಅವರ ಬಗ್ಗೆ ಮಾತನಾಡಲು ಅಥವಾ ಯೋಚನೆ ಮಾಡಲು ತಮಗೆ ಆಸಕ್ತಿಯಿಲ್ಲ. ಕುಮಾರಸ್ವಾಮಿ ಆಡಳಿತ ರಾಕ್ಷಸೀ ಆಡಳಿತ ಎಂದಿದ್ದರು. ಈಗ ಕುಮಾರಸ್ವಾಮಿ ಸರ್ಕಾರ ಮುಂದುವರೆದಿದ್ದರೆ ಈವರೆಗೆ 50 ಸಾವಿರ ಜನ ಸಾವನ್ನಪ್ಪುತ್ತಿದ್ದರು ಎಂದು  ಬಾಲಿಶ ಹೇಳಿಕೆ ನೀಡಿದ್ದಾರೆ ಎಂದು ಕಿಡಿ ಕಾರಿದರು. 

ಇಂತವರಿಂದ ತಮಗೆ ಸರ್ಟಿಫಿಕೇಟ್ ಅವಶ್ಯಕತೆಯಿಲ್ಲ. ಋಣಮುಕ್ತ ಕಾಯಿದೆ, ಸಾಲಮನ್ನಾ ಸೇರಿದಂತೆ ಅನೇಕ ಜನೋಪಯೋಗಿ ಯೋಜನೆಗಳನ್ನು ಜಾರಿಗೊಳಿಸಿರುವ ತೃಪ್ತಿ ತಮಗಿದೆ. ಇಂದಲ್ಲ ನಾಳೆ ತಾವು ಮಾಡಿದ ಕೆಲಸಗಳನ್ನು ಜನರು ನೆನಪಿಸಿಕೊಳ್ಳುವ ಕಾಲವೇನು ದೂರಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT