ದೇವೇಗೌಡ-ಪ್ರಧಾನಿ ಮೋದಿ 
ರಾಜಕೀಯ

ಭಾರತ-ಚೀನಾ ಸಂಘರ್ಷ: 'ರಾಷ್ಟ್ರೀಯತೆಯ ಕೂಗಾಟ ನಿಲ್ಲಿಸಿ'; ಮೋದಿಗೆ ಬರೆದ ಪತ್ರದಲ್ಲಿ ದೇವೇಗೌಡ ಕಳವಳ

ಭಾರತ ಮತ್ತು ಚೀನಾ ಗಡಿಯಲ್ಲಿ ಉಂಟಾಗಿರುವ ಸಂಘರ್ಷ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷಗಳ ನಾಯಕರ ಸಭೆ ಕರೆದಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿದ್ದಾರೆ.

ಬೆಂಗಳೂರು: ಭಾರತ ಮತ್ತು ಚೀನಾ ಗಡಿಯಲ್ಲಿ ಉಂಟಾಗಿರುವ ಸಂಘರ್ಷ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷಗಳ ನಾಯಕರ ಸಭೆ ಕರೆದಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿದ್ದಾರೆ.

ಈ ಕುರಿತು ಮೋದಿ ಅವರಿಗೆ ಪತ್ರ ಬರೆದಿರುವ ದೇವೇಗೌಡ, ಗಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇನಾಧಿಕಾರಿಗಳು, ಯೋಧರ ಸ್ಥಿತಿಗತಿ, ರಾಜತಾಂತ್ರಿಕ ವ್ಯವಸ್ಥೆ ಕುರಿತ ಪರಿಸ್ಥಿತಿ ಮತ್ತು ಮಾತುಕತೆ ಪ್ರಗತಿ ಕುರಿತು ವಿರೋಧ ಪಕ್ಷದ ನಾಯಕರಿಗೆ ವಿವರವಾದ ಮಾಹಿತಿ ನೀಡಬೇಕು. ಗಡಿ ಸಂಘರ್ಷದ ಬಗ್ಗೆ ಮಾಧ್ಯಮಗಳಿಂದ ಮಾಹಿತಿಗಳು ಲಭ್ಯವಾಗಿದೆಯೇ ಹೊರತು ಇದೂವರೆಗೆ ನಿಖರ ವಿವರಗಳು ಕೇಂದ್ರದಿಂದ ದೊರೆತಿಲ್ಲ. ಹೀಗಾಗಿ ಜನತೆಗೆ ಖಚಿತ ಮಾಹಿತಿ ಒದಗಿಸುವಂತೆ ಕೋರಿದ್ದಾರೆ.

ಇದು ಪ್ರಚೋದನೆ ಮತ್ತು ಪ್ರತೀಕಾರದ ಸಮಯವಲ್ಲ. ಇತ್ತೀಚಿನ ದಿನಗಳಲ್ಲಿ, ಸಶಸ್ತ್ರ ಪಡೆಗಳನ್ನು ರಾಜಕೀಯಗೊಳಿಸುವ ಪ್ರಯತ್ನ ನಡೆಯುತ್ತಿರುವುದು ಅಪಾಯಕಾರಿ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕೆಲ ಮಾಧ್ಯಮಗಳು ನಕಲಿ ಮಾಹಿತಿ ಮತ್ತು ಅಗ್ಗದ ವಾಕ್ಚಾತುರ್ಯದಿಂದ ನಮ್ಮ ಸೈನಿಕರು ಮತ್ತು ರಾಜತಾಂತ್ರಿಕ ಸಿಬ್ಬಂದಿಯ ಪ್ರಾಣಕ್ಕೆ ಅಪಾಯವನ್ನುಂಟುಮಾಡುತ್ತಿವೆ. ಈ ಬಗ್ಗೆ ತನಿಖೆ ನಡೆಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ವಾಹಿನಿಗಳು ಈ ಕುರಿತು ವಿಶ್ಲೇಷಣೆ ಮತ್ತು ವರದಿ ಮಾಡುವುದನ್ನು ನಿಲ್ಲಿಸಬೇಕು ಎಂದು ಇದರ ಅರ್ಥವಲ್ಲ. ಆದರೆ ಬಲವಾದ ಭಾಷೆಯನ್ನು ಬಳಸಬಾರದು ಎಂದು ಒತ್ತಾಯಿಸುತ್ತೇನೆ. ಸಹಕಾರಿ ಸಂಸ್ಥೆಗಳಿಗೆ ಇದು ಎಚ್ಚರಿಕೆ ಗಂಟೆಯಾಗಿದೆ. ದೇಶೀಯ ರಾಜಕೀಯ ಮತ್ತು ರಾಷ್ಟ್ರೀಯ ಭದ್ರತಾ ಹಿತಾಸಕ್ತಿಗಳನ್ನು ಬದಿಗಿರಸಲು ಸಾಧ್ಯವಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran conflict: ತೈಲ ಸಾಗಣೆ ನಿಂತರೆ ಇದೂವರೆಗೆ ನಡೆಸಿದ್ದಕ್ಕಿಂತ 20 ಪಟ್ಟು ಹೆಚ್ಚು ದಾಳಿ: ಇರಾನ್‌ಗೆ ಟ್ರಂಪ್ ಕಠಿಣ ಎಚ್ಚರಿಕೆ

US-Iran war ಎಫೆಕ್ಟ್: ಪಾಕಿಸ್ತಾನದಲ್ಲಿ ಇಂಧನ ಸಂಕಷ್ಟ; ಶಾಲೆಗಳು 2 ವಾರ ಬಂದ್, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Epic Fury: ಇರಾನ್‌ನಲ್ಲಿ ಸೈನಿಕ ಕಾರ್ಯಾಚರಣೆ ಸದ್ಯದಲ್ಲೇ ಅಂತ್ಯಗೊಳ್ಳಲಿದೆ: ಡೊನಾಲ್ಡ್ ಟ್ರಂಪ್

ಆಹಾರ, ಶೂ, ಸಮವಸ್ತ್ರ ಎಲ್ಲಾ ಸೌಲಭ್ಯಗಳಿದ್ದರೂ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿತ: ಸರ್ಕಾರ ವಿಷಾದ

'ದೆಹಲಿಯಲ್ಲಿ ಯಾರನ್ನು ಭೇಟಿ ಮಾಡಿದ್ದೇನೆ ಎಂದು ಬಹಿರಂಗಪಡಿಸುವುದಿಲ್ಲ, ಬೆಂಗಳೂರಿನಲ್ಲಿ ಶಾಸಕರಿಗೆ ಡಿನ್ನರ್ ಮೀಟಿಂಗ್ ಏರ್ಪಡಿಸಿದ್ದೇನೆ': ಡಿ ಕೆ ಶಿವಕುಮಾರ್-Video

SCROLL FOR NEXT