ರಮೇಶ್ ಬಾಬು 
ರಾಜಕೀಯ

ದಳಪತಿಗಳ ಕೋಟೆಯಲ್ಲಿ ರಾಜಿನಾಮೆ ಪರ್ವ: ಜೆಡಿಎಸ್ ಗೆ ರಮೇಶ್​ ಬಾಬು ಗುಡ್ ಬೈ!

ಆಗ್ನೇಯ ಪದವೀಧರರ ಕ್ಷೇತ್ರದಿಂದ ಜೆಡಿಎಸ್​ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್​ ಬಾಬು ಇಂದು ಪಕ್ಷದ​ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.

ಬೆಂಗಳೂರು: ಆಗ್ನೇಯ ಪದವೀಧರರ ಕ್ಷೇತ್ರದಿಂದ ಜೆಡಿಎಸ್​ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್​ ಬಾಬು ಇಂದು ಪಕ್ಷದ​ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.

ರಮೇಶ್​ ಬಾಬು ಈಗಾಗಲೇ ಜೆಡಿಎಸ್​ ವರಿಷ್ಠ ಎಚ್.ಡಿ. ದೇವೇಗೌಡರಿಗೆ ರಾಜೀನಾಮೆ ಪತ್ರ ರವಾನೆ ಮಾಡಿದ್ದಾರೆ. 

ಪಕ್ಷದಲ್ಲಿ ಪ್ರಾಮಾಣಿಕರಿಗೆ ಸರಿಯಾದ ಅವಕಾಶ ಸಿಗಲಿಲ್ಲ. ಪೂರ್ಣಾವಧಿಗೂ ಅವಕಾಶ ಇಲ್ಲ. ಕಾರ್ಯಕರ್ತರಿಗೂ ಸಹ ಯಾವುದೇ ಅವಕಾಶ ಸಿಗುತ್ತಿಲ್ಲ. ಜೆಡಿಎಸ್​ ದಿನೇ ದಿನೇ ರಾಜಕೀಯ ಗುಣ ಕಳೆದುಕೊಳ್ಳುತ್ತಿದೆ" ಎಂದು ಹೇಳಿದರು.

ಪಕ್ಷದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದರೂ ಒಂದು ಪೂರ್ಣ ಅವಧಿಗೆ ವಿಧಾನಪರಿಷತ್ತಿನ ಸದಸ್ಯನಾಗಿ ಕಾರ್ಯನಿರ್ವಹಿಸುವ ಅವಕಾಶ ದೊರೆಯಲಿಲ್ಲ ಮತ್ತು ಇತರ ಕಾರಣಗಳಿಂದ ತಾನು ರಾಜೀನಾಮೆ ನೀಡುತ್ತಿರುವುದಾಗಿ ರಮೇಶ್ ಬಾಬು ಅವರು ಬಿಡುಗಡೆ ಮಾಡಿರುವ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!