ಡಿ ಕೆ ಶಿವಕುಮಾರ್ 
ರಾಜಕೀಯ

ಒಂದು ಸಮಯದಲ್ಲಿ ಮಿತ್ರ ಇಂದು ಶತ್ರು: ಡಿ ಕೆ ಶಿವಕುಮಾರ್ ಕೆಪಿಸಿಸಿ ಪಟ್ಟಕ್ಕೆ ಜೆಡಿಎಸ್ ನಾಯಕರಿಂದ ಅಡ್ಡಗಾಲು?

ಒಕ್ಕಲಿಗ ಸಮುದಾಯದ ಪ್ರಬಲ ಮುಖಂಡ, ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹುದ್ದೆಗೆ ಪ್ರಬಲ ಆಕಾಂಕ್ಷಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಇವರ ಹಾದಿಗೆ ಅನಿರೀಕ್ಷಿತವಾಗಿ ಕೆಲವರು ಅಡ್ಡಗಾಲು ಹಾಕುತ್ತಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ಒಕ್ಕಲಿಗ ಸಮುದಾಯದ ಪ್ರಬಲ ಮುಖಂಡ, ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಹುದ್ದೆಗೆ ಪ್ರಬಲ ಆಕಾಂಕ್ಷಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಇವರ ಹಾದಿಗೆ ಅನಿರೀಕ್ಷಿತವಾಗಿ ಕೆಲವರು ಅಡ್ಡಗಾಲು ಹಾಕುತ್ತಿದ್ದಾರೆ ಎನ್ನಲಾಗಿದೆ.


ಚುನಾವಣೆಗಳಲ್ಲಿ ಒಕ್ಕಲಿಗರ ಮತಗಳನ್ನು ಸೆಳೆಯಲು ಪ್ರಯತ್ನಿಸುತ್ತಿರುವ ಜೆಡಿಎಸ್, ಶಿವಕುಮಾರ್ ಅವರಿಗೆ ಕೆಪಿಸಿಸಿ ಪಟ್ಟ ತಪ್ಪಿಸಲು ನೋಡುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದರೆ ದಕ್ಷಿಣ ಕರ್ನಾಟಕ ಭಾಗದ ಒಕ್ಕಲಿಗ ಮತದಾರರನ್ನು ಭದ್ರಕೋಟೆಯನ್ನಾಗಿ ಮಾಡಿಕೊಳ್ಳಬಹುದು ಎಂಬುದು ಜೆಡಿಎಸ್ ನಾಯಕರ ಸಂದೇಹ, ಆತಂಕವಾಗಿದೆ ಎಂದು ಹೇಳಲಾಗುತ್ತಿದೆ.


ರಾಜಕೀಯದಲ್ಲಿ ಕಾಲ ಸ್ಥಿತ್ಯಂತರದಲ್ಲಿ ಏನು ಬೇಕಾದರೂ ಆಗಬಹುದು ಎಂಬುದಕ್ಕೆ ಇದುವೇ ನಿದರ್ಶನ. ಕೆಲ ತಿಂಗಳ ಹಿಂದೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿದ್ದಾಗ ಡಿ ಕೆ ಶಿವಕುಮಾರ್ ಅವರು ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಹಿರಂಗವಾಗಿಯೇ ಬೆಂಬಲಿಸಿ ಒಕ್ಕಲಿಗರ ಒಗ್ಗಟ್ಟನ್ನು ಸಂಪೂರ್ಣವಾಗಿ ಪ್ರದರ್ಶಿಸಿದ್ದರು.ಅದು ಮುಂಬೈಯ ಖಾಸಗಿ ಹೊಟೇಲ್ ನಲ್ಲಿ ಉಳಿದುಕೊಂಡಿದ್ದ ಎರಡೂ ಪಕ್ಷಗಳ ಶಾಸಕರನ್ನು ಮನವೊಲಿಸಿ ಕರೆತರುವ ವಿಚಾರದಲ್ಲಿಯಾಗಿರಬಹುದು ಅಥವಾ ಕಾಂಗ್ರೆಸ್ ನೊಳಗೆ ಕೆಲವರಲ್ಲಿದ್ದ ಅಸಮಾಧಾನವನ್ನು ಶಮನಗೊಳಿಸಿ ಸಮ್ಮಿಶ್ರ ಸರ್ಕಾರವನ್ನು ಉಳಿಸಲು ಪ್ರಯತ್ನಿಸಿದ್ದ ವಿಚಾರದಲ್ಲಿಯಿರಬಹುದು ಡಿ ಕೆ ಶಿವಕುಮಾರ್ ಅವರು ಮಾಡಿದ್ದ ಪ್ರಯತ್ನ ಅಷ್ಟಿಷ್ಟಲ್ಲ, ಆದರೆ ಆ ಪ್ರಯತ್ನ ಫಲಿಸಲಿಲ್ಲ, ಮೈತ್ರಿ ಸರ್ಕಾರ ಮುರಿದುಬಿತ್ತು.


ಇಂದು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದು ಆರು ತಿಂಗಳ ಮೇಲಾಗಿದೆ. ಪರಿಸ್ಥಿತಿ ಬದಲಾಗಿದೆ. ಡಿ ಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ಮಾಡಿದರೆ ಅವರು ಕೆಲವು ಕಾನೂನು ಸಮಸ್ಯೆಗಳನ್ನು ಎದುರಿಸುತ್ತಿರುವುದರಿಂದ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಸಮಸ್ಯೆ, ಮುಜುಗರ ಉಂಟಾಗಬಹುದು ಎಂದು ಜೆಡಿಎಸ್ ನ ಕೆಲವು ನಾಯಕರು ಕಾಂಗ್ರೆಸ್ ನಾಯಕರ ಕಿವಿಯಲ್ಲಿ ಊದಿ ಅದು ಕಾಂಗ್ರೆಸ್ ಹೈಕಮಾಂಡ್ ಗೆ ತಲುಪಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಈಗ ಕುಮಾರಸ್ವಾಮಿಯವರು ಕೂಡ ಶಿವಕುಮಾರ್ ಬಗ್ಗೆ ಒಳ್ಳೆಯ ಮಾತುಗಳನ್ನು ತಮ್ಮ ಆಪ್ತ ವಲಯಗಳಲ್ಲಿ ಹೇಳಿಕೊಳ್ಳುತ್ತಿಲ್ಲ.ಇದರಿಂದ ಒಂದಂತೂ ಸ್ಪಷ್ಟವಾಗಿದೆ. ಒಕ್ಕಲಿಗ ನಾಯಕರ ನಡುವಿನ ಒಗ್ಗಟ್ಟು ಹಳೆಯ ಮರೆತು ಹೋದ ವಿಷಯವಾಗಿದೆ ಎನ್ನಲಾಗುತ್ತಿದೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆ 37 ಸ್ಥಾನಗಳು ಬಂದಿವೆ. ಆದರೆ 2 ಸಾವಿರ ಮತಗಳ ಕಡಿಮೆ ಅಂತರಗಳಿಂದ 30 ಸೀಟುಗಳನ್ನು ಕಳೆದುಕೊಂಡಿದೆ. ಅಂದರೆ ದಕ್ಷಿಣ ಕರ್ನಾಟಕದಲ್ಲಿ ಈ ಕ್ಷೇತ್ರಗಳಲ್ಲಿ ತೀವ್ರ ಪೈಪೋಟಿಯಿದೆ ಎನ್ನಲಾಗಿದೆ. ಒಂದು ವೇಳೆ ಶಿವಕುಮಾರ್ ಕಾಂಗ್ರೆಸ್ ಅಧ್ಯಕ್ಷರಾದರೆ ಈ ಸೀಟುಗಳೆಲ್ಲಾ ಸಂಪೂರ್ಣವಾಗಿ ಕಾಂಗ್ರೆಸ್ ಗೆ ಹೋಗಬಹುದು. ಹಳೆ ಮೈಸೂರು ಭಾಗದಲ್ಲಿ ಬಿಜೆಪಿಯ ಪೈಪೋಟಿಗೆ ಜೆಡಿಎಸ್ ಈಗಾಗಲೇ ಸೋತು ಸುಣ್ಣವಾಗಿದೆ. 


ಹೀಗೆಲ್ಲಾ ತೆರೆಮರೆಯ ನಾಟಕ ಒಂದು ಕಡೆ ನಡೆಯುತ್ತಿದ್ದರೆ, ವಿರೋಧ ಪಕ್ಷಗಳ ನಾಯಕರಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ, ಶಿವಕುಮಾರ್ ಅವರಿಗೆ ಕೆಪಿಸಿಸಿ ಪಟ್ಟ ತಪ್ಪಿಸಲು ನೋಡುತ್ತಿದ್ದಾರೆ, ಇದಕ್ಕಾಗಿ ಅವರಿಬ್ಬರು ಒಂದಾಗಿದ್ದಾರೆ ಎನ್ನಲಾಗುತ್ತಿದೆ. ಶಿವಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ಹೈಕಮಾಂಡ್ ಯಾವಾಗ ಘೋಷಿಸುತ್ತದೆ ಎಂದು ಅವರು ಮತ್ತು ಅವರ ಅಭಿಮಾನಿಗಳು ಕಳೆದ ಮೂರು ತಿಂಗಳಿನಿಂದ ಕಾಯುತ್ತಿದ್ದಾರೆ. ಜೆಡಿಎಸ್ ನ ಕುತಂತ್ರದಿಂದ ವಿಳಂಬವಾಗುತ್ತಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT