ಪ್ರಹ್ಲಾದ್ ಜೋಶಿ 
ರಾಜಕೀಯ

ನಾನು ಯಾವುದೇ ಅತೃಪ್ತ ಶಾಸಕರ ಸಭೆ ನಡೆಸಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ನಾನು ಯಾವುದೇ ಅತೃಪ್ತ ಶಾಸಕರನ್ನು ಸೇರಿಸಿ ಸಭೆ ನಡೆಸಿಲ್ಲ‌. ಶಾಸಕರ ಸಭೆ ನಡೆಸುವಷ್ಟು ನಾನು ದೊಡ್ಡ ನಾಯಕನೂ ಅಲ್ಲ. ಮುಖ್ಯಮಂತ್ರಿ ಸ್ಥಾನವನ್ನು ಯಾರೂ ಅಭದ್ರಗೊಳಿಸುತ್ತಿಲ್ಲ.

ಹುಬ್ಬಳ್ಳಿ: ನಾನು ಯಾವುದೇ ಅತೃಪ್ತ ಶಾಸಕರನ್ನು ಸೇರಿಸಿ ಸಭೆ ನಡೆಸಿಲ್ಲ‌. ಶಾಸಕರ ಸಭೆ ನಡೆಸುವಷ್ಟು ನಾನು ದೊಡ್ಡ ನಾಯಕನೂ ಅಲ್ಲ. ಮುಖ್ಯಮಂತ್ರಿ ಸ್ಥಾನವನ್ನು ಯಾರೂ ಅಭದ್ರಗೊಳಿಸುತ್ತಿಲ್ಲ. ಶಾಸಕರ ಸಭೆ ನಡೆಸಿದ್ದೇನೆ ಎನ್ನುವುದು ಶುದ್ಧ ಸುಳ್ಳು.ಕೆಲವು ಅತೃಪ್ತ ಆತ್ಮಗಳು ಸುಳ್ಳು ವದಂತಿ ಹರಡುತ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟೀಕರಣ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಮೂರು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತಾರೆ.ಯಡಿಯೂರಪ್ಪ ಅವರು ಸಮರ್ಥವಾಗಿ ಸರ್ಕಾರವನ್ನು ನಡೆಸುತ್ತಿದ್ದಾರೆ.

ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವರ ನೇತೃತ್ವದಲ್ಲಿಯೇ ರಾಜ್ಯ ಸರ್ಕಾರ ಮುಂದುವರಿಯಲಿದೆ ಎನ್ನುವ ಮೂಲಕ ಮುಖ್ಯಮಂತ್ರಿ ಬದಲಾವಣೆ ಚೆರ್ಚೆಗೆ ತೆರೆ ಎಳೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್