ರಾಜಕೀಯ

ಬಿಜೆಪಿಯಿಂದ ಅವಿಶ್ವಾಸ ನಿರ್ಣಯಕ್ಕೆ ಸಿದ್ದತೆ ಹಿನ್ನೆಲೆ: ವಿಧಾನಸಭೆ ಉಪಾಧ್ಯಕ್ಷ ಕೃಷ್ಣಾ ರೆಡ್ಡಿ ರಾಜೀನಾಮೆ

Raghavendra Adiga

ಬೆಂಗಳೂರು: ವಿಧಾನಸಭೆ ಉಪಾಧ್ಯಕ್ಷ ಕೃಷ್ಣಾರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕೃಷ್ಣಾ ರೆಡ್ಡಿಯವರ ವಿರುದ್ಧ ಬಿಜೆಪಿ ಸದಸ್ಯರು ಅವಿಶ್ವಾಸ ನಿರ್ಣಯ ಕೈಗೊಳ್ಳಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಮುಜುಗರಕ್ಕೆ ಒಳಗಾಗುವುದನ್ನು ತಪ್ಪಿಸಿಕೊಳ್ಲಲು ಅವರು ಈ ನಿರ್ಧಾರ ಕೈಗೊಂಡರು.

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ನ ಕೆ.ಆರ್. ರಮೇಶ್ ಕುಮಾರ್ ವಿಧಾನಸಭೆ ಸಭಾಧ್ಯಕ್ಷರಾಗಿಊ ಜೆಡಿಎಸ್ ನ ಕೃಷ್ಣಾ ರೆಡ್ಡಿ ಉಪಾಧ್ಯಕ್ಷರಾಗಿಯೂ ನೇಮಕವಾಗಿದ್ದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತವೂ ಉಪಾಧ್ಯಕ್ಷ ಸ್ಥಾನದಲ್ಲಿ ಬದಲಾವಣೆಯಾಗಿರಲಿಲ್ಲ. ಕೃಷ್ಣಾ ರೆಡ್ಡಿ ತಾವೇ ಉಪಾಧ್ಯಕ್ಷರಾಗಿ ಮುಂದುವರಿದಿದ್ದರು.

ಕೃಷ್ಣಾ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ವಿಚಾರವನ್ನು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ.

ಪ್ರಶ್ನೋತ್ತರ ಅವಧಿಯ ನಂತರ ಕಾಗೇರಿ ಈ ವಿಷಯ ತಿಳಿಸಿ ವರು ರಾಜೀನಾಮೆ ನೀಡಿರುವ ಕಾರಣ ಅವಿಶ್ವಾಸ ನಿರ್ಣಯ ಪ್ರಸ್ತಾಪ ಕೈಬಿಡುವುದಾಗಿ ಹೇಳಿದರು.

SCROLL FOR NEXT