ರಾಜಕೀಯ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುವ ಹಕ್ಕು ನಮಗಿದೆ: ಸಿದ್ದರಾಮಯ್ಯ

Manjula VN

ಬೆಂಗಳೂರು: ಸಂಸತ್ತಿನಲ್ಲಿ ಅಂಗೀಕಾರಗೊಂಡ ಕಾಯ್ದೆಯನ್ನು ವಿರೋಧಿಸುವ ಹಕ್ಕು ನಮಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 

ವಿಧಾನಸಭೆಯಲ್ಲಿ ನಡೆದ ಸಂವಿಧಾನದ ಮೇಲಿನ ವಿಶೇಷ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಒಂದು ಸರ್ಕಾರ ಸಂಸತ್ತಿನಲ್ಲಿ 543 ಸ್ಥಾನಗಳಿಗೆ 400 ಸ್ಥಾನಗಳನ್ನು ಹೊಂದಿದ್ದರೂ, ಸಂವಿಧಾನದ ವಿರುದ್ಧವಾಗಿ ನಡೆದುಕೊಂಡರೆ, ಅದನ್ನು ವಿರೋಧಿಸುವ ಹಕ್ಕು ನಮಗಿದೆ. ಸಂಸತ್ತಿನಲ್ಲಿ ಈ ಹಿಂದೆ ಅಂಗೀಕರಿಸಲಾಗಿರುವ ಸಿಎಎ ಕಾನೂನು ನನ್ನ ಪ್ರಕಾರ ಸಂವಿಧಾನದ ಮೂಲ ಆಶಯಗಳಿಗ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. 

ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸುವುದೇ ಪ್ರಜಾಪ್ರಭುತ್ವ. ಒಂದು ಕಾನೂನಿನ ಬಗ್ಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದರೆ ಅದು ದೇಶದ್ರೋಹ ಹೋಗಾಗುತ್ತದೆ? ಹಾಗಾದರೆ ವಾಕ್ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ ಏಕಿರಬೇಕು? ಎಂದು ಪ್ರಶ್ನಿಸಿದ್ದಾರೆ. 

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುತ್ತಿರುವವರ ಬಗ್ಗೆ ನಡೆದುಕೊಳ್ಳುತ್ತಿರುವ ರೀತಿ ಪ್ರಜಾಪ್ರಭುತ್ವದಲ್ಲಿ ನೋಡಲು ಸಾಧ್ಯವಿಲ್ಲ. ಅದೇನಿದ್ದರೂ ನಿರಂಕುಶ ಪ್ರಭುತ್ವದಲ್ಲಿ ಕಾಣಬಹುದು ಎಂದು ತಿಳಿಸಿದ್ದಾರೆ. 

ಪೌರತ್ವ ತಿದ್ದುಪಡಿ ಕಾಯ್ದೆಯನ್ನು 10 ರಾಜ್ಯಗಳು ವಿರೋಧಿಸುತ್ತಿವೆ. ಈ ಬಗ್ಗೆ ನಮ್ಮ ಅಭಿಪ್ರಾಯವನ್ನು ಲೋಕಸಭೆಗೆ ತಿಳಿಸಿ ಎಂದು ಸ್ಪೀಕರ್ ಬಳಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ಮೀಸಲಾತಿ ಮೂಲಭೂತ ಹಕ್ಕು ಎಂದು ನಾವು ರಾಜ್ಯದಲ್ಲಿ ಕಾನೂನು ತಂದು, ಮೀಸಲಾತಿಯನ್ನು ಜಾರಿಗೆ ತಂದಿದ್ದೇವೆಂದು ಹೇಳಿದ್ದಾರೆ. 

SCROLL FOR NEXT