ಡಿ.ಕೆ ಶಿವಕುಮಾರ್ 
ರಾಜಕೀಯ

ಸಾಮಾನ್ಯ ಜನರ ವೈಯಕ್ತಿಕ ನಡೆಗಳ ಮೇಲೆ ಕಣ್ಣಿಡಲು ಅವರೇನು ಭಯೋತ್ಪಾದಕರಾ?

ಕೇಂದ್ರ ಸರ್ಕಾರ ಜನರಿಗೆ ಉಪಕಾರ ಮಾಡದಿದ್ದರೂ, ಆಧಾರ್, ಎನ್‍ಎಸ್‌ಆರ್‌ ಹೆಸರಿನಲ್ಲಿ ಸಾಮಾನ್ಯ ಜನರ ವೈಯಕ್ತಿಕ ನಡೆಗಳ ಮೇಲೆ ನಿಗಾ ಇಡುತ್ತಿದೆ. ಕಣ್ಣಿಡಲು ಅವರೇನು ಭಯೋತ್ಪಾದಕರಾ? ಎಂದು ನಿಯೋಜಿತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು: ಕೇಂದ್ರ ಸರ್ಕಾರ ಜನರಿಗೆ ಉಪಕಾರ ಮಾಡದಿದ್ದರೂ, ಆಧಾರ್, ಎನ್‍ಎಸ್‌ಆರ್‌ ಹೆಸರಿನಲ್ಲಿ ಸಾಮಾನ್ಯ ಜನರ ವೈಯಕ್ತಿಕ ನಡೆಗಳ ಮೇಲೆ ನಿಗಾ ಇಡುತ್ತಿದೆ. ಕಣ್ಣಿಡಲು ಅವರೇನು ಭಯೋತ್ಪಾದಕರಾ? ಎಂದು ನಿಯೋಜಿತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿ ಮಾಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನರ ವೈಯಕ್ತಿಕ ಬದುಕಿನಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದು ಸರಿಯಲ್ಲ. 

ಜನರನ್ನು ಕೇಂದ್ರ ಸರ್ಕಾರ ನಡೆಸಿಕೊಳ್ಳುತ್ತಿರುವ ರೀತಿ ಸರಿ ಇಲ್ಲ. ಅವರಿಗೆ ನೀವು ಉಪಕಾರ ಮಾಡದಿದ್ದರೂ ಪರವಾಗಿಲ್ಲ. ಅವರಿಗೆ ಮಾನಸಿಕ ಹಿಂಸೆ ನೀಡಬೇಡಿ. ಅವರು ಬದುಕಿದರೆ ದೇಶ ನೆಮ್ಮದಿಯಾಗಿ ಬದುಕುತ್ತದೆ. ಅವರು ಆರ್ಥಿಕವಾಗಿ ಬಲವಾದರೆ ದೇಶ ಬಲವಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಳ್ಳಿ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಪ್ರತಿ ಕ್ಷೇತ್ರಕ್ಕೆ ಹೋಗಿ, ಅಲ್ಲಿನ ಕಾರ್ಯಕರ್ತರನ್ನು ಭೇಟಿ ಮಾಡಿ ಅವರ ಅಹವಾಲುಗಳನ್ನು ಆಲಿಸಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಡಿ. ಕೆ ಶಿವಕುಮಾರ್ ತಿಳಿಸಿದ್ದಾರೆ.

ಎರಡು ದಿನ ತಡವಾಗಬಹುದು. ಆದರೆ ಪ್ರತಿ ಕ್ಷೇತ್ರಕ್ಕೂ ಭೇಟಿ ನೀಡುತ್ತೇನೆ. ನಾವು ಗೆದ್ದಿರುವ ಕ್ಷೇತ್ರ ಹಾಗೂ ಸೋತಿರುವ ಕ್ಷೇತ್ರಗಳಿಗೆ ಭೇಟಿ ನೀಡಿ ಅಲ್ಲಿನ ಕಾರ್ಯಕರ್ತರನ್ನು ಭೇಟಿ ಮಾಡಿ ಅವರ ಅಭಿಪ್ರಾಯ ಪಡೆದು ಅವರಲ್ಲಿ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ. ಅಲ್ಲದೆ ಕಾರ್ಯಕರ್ತರ ಅಭಿಪ್ರಾಯದಿಂತೆ ನಾನು ನಡೆಯುತ್ತೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್