ರಾಜಕೀಯ

ಮಧ್ಯಪ್ರದೇಶ ರಾಜಕೀಯ ಹೈಡ್ರಾಮಾ: ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ತೀವ್ರ ಗದ್ದಲ

Manjula VN

ಬೆಂಗಳೂರು: ಮಧ್ಯಪ‍್ರದೇಶದ ಕಾಂಗ್ರೆಸ್ ಶಾಸಕರು ವಾಸ್ತವ್ಯ ಹೂಡಿರುವ ರಮಣ ರೆಸಾರ್ಟ್'ಗೆ ಪ್ರವೇಶಿಸಲು ಯತ್ನಿಸಿದ ಅಲ್ಲಿನ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬಂಧನ ಪ್ರಶ್ನಿಸಿ ಕಾಂಗ್ರೆಸ್ ಸದಸ್ಯರು ವಿಧಾನಸಭೆಯಲ್ಲಿ ತೀವ್ರ ಗದ್ದಲವೆಬ್ಬಿಸಿದರು.

ಕಾಂಗ್ರೆಸ್ ಸದಸ್ಯ ಎಚ್.ಕೆ.ಪಾಟೀಲ್ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದರು. ಹೊರಗಿನಿಂದ ಬಂದವರನ್ನು ಕಾನೂನುಬಾಹಿರವಾಗಿ ಬಂಧಿಸಲಾಗಿದೆ ಎಂದು ಆರೋಪಿಸಿದರು.

ಬಳಿಕ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಕಾನೂನನ್ನೇಕೆ ಪಾಲನೆ ಮಾಡಲಾಗುತ್ತಿಲ್ಲ. ವಿಧಾನಸಭೆ ಸದಸ್ಯರನ್ನು ಬಂಧಿಸಿದ ಕೂಡಲೇ ಸ್ಪೀಕರ್'ಗೆ ಈ ಬಗ್ಗೆ ಮಾಹಿತಿ ನೀಡಬೇಕು ಎಂದು ಹೇಳಿದರು. 

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸಚಿವ ಕೆ.ಎಸ್.ಈಶ್ವರಪ್ಪ , ಶೂನ್ಯವೇಳೆಯಲ್ಲಿ ಯಾವುದೇ ಅನುಮತಿ ಪಡೆಯದೆ ನೋಟಿಸ್ ನೀಡದೆ, ಶಾಸಕರು ಅನವಶ್ಯಕ ವಿಷಯ ಪ್ರಸ್ತಾಪಿಸುತ್ತಿದ್ದಾರೆ ಎಂದು ಆರೋಪಿಸಿದರು. ಇದಕ್ಕೆ ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ, ಸಿ.ಟಿ.ರವಿ ಮತ್ತಿತರರು ಬೆಂಬಲ ಸೂಚಿಸಿದರು.

SCROLL FOR NEXT