ಯಡಿಯೂರಪ್ಪ 
ರಾಜಕೀಯ

'ಕಾಂಗ್ರೆಸ್ಸಿಗರಿಗೆ ಆಡಳಿತ ನಡೆಸಿ ಸಾಕಾಗೋಗಿದೆ, ನಿಮ್ಮ ಸರದಿ, ನೀವು ಮುಂದುವರಿಸಿ'

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರ ಕೊನೆ ಚುನಾವಣೆ ಪ್ರಸಂಗದ ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಚರ್ಚೆ ನಡೆಯಿತು.

ಬೆಂಗಳೂರು; ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರ ಕೊನೆ ಚುನಾವಣೆ ಪ್ರಸಂಗದ ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಚರ್ಚೆ ನಡೆಯಿತು.

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ವೇಳೆ ಮಾತನಾಡುತ್ತಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಚಿವ ಕೆ.ಎಸ್.ಈಶ್ವರಪ್ಪರನ್ನು ಉದ್ದೇಶಿಸಿ ನನಗೆ ಸಾಕಾಗಿದೆ. ಇನ್ನು ಚುನಾವಣೆಗೆ ನಿಲ್ಲಲ್ಲ. ನೀವು ಮುಂದುವರಿಸಿ ಎಂದು ಹೇಳಿದರು.

ಆಗ ಸಚಿವ ಈಶ್ವರಪ್ಪ, ಕೊನೆ ಚುನಾವಣೆ ಅಂಥ ನೀವು ಹೇಳುವುದು ಬೇಡ. ಹಾಗೇ ಹೇಳಿದರೂ ಮತ್ತೆ ಮತ್ತೆ ಚುನಾವಣೆಗೆ ನಿಲ್ಲುತ್ತೀರಾ ಎಂದು ಚುನಾವಣಾ ನಿವೃತ್ತಿ ಘೋಷಣೆ ಮಾಡಿದರೂ ಮತ್ತೆ ಮತ್ತೆ ಚುನಾವಣೆಯಲ್ಲಿ ನಿಲ್ಲುತ್ತಿರುವ ಬಗ್ಗೆ ಕಿಚಾಯಿಸಿದರು.

ಸಚಿವ ಕೆ.ಎಸ್​ ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ನಾನು ಚುನಾವಣೆಗೆ ನಿಲ್ಲಬಾರದು ಎಂದುಕೊಳ್ಳುತ್ತೇನೆ. ಆದರೆ, ಅಷ್ಟೊತ್ತಿಗೆ ಯಾವುದಾದರೂ ಒಂದು ರಾಜಕೀಯ ಬೆಳವಣಿಗೆ ನಡೆಯುತ್ತೆ. ಆಗ ಹೈಕಮಾಂಡ್​​ ಒತ್ತಡ ಮೇರೆಗೆ ನಿಲ್ಲಲೇಬೇಕಾಗುತ್ತದೆ ಎಂದರು. 

ಎಸ್​​ಸಿ ಮತ್ತು ಎಸ್​​ಟಿ ವಿದ್ಯಾರ್ಥಿಗಳಿಗೆ ನೀಡಲಾದ ಲ್ಯಾಪ್‌ಟಾಪ್ ಖರೀದಿಯಲ್ಲಿ ಅಕ್ರಮ ಆಗಿದೆ. ಈ ಬಗ್ಗೆ ತನಿಖೆ ಆಗಬೇಕು ಎಂದರು ಸಿದ್ದರಾಮಯ್ಯ. ಇದಕ್ಕೆ ದನಿಗೂಡಿಸಿದ ಈಶ್ವರಪ್ಪ, ಈ ತನಿಖೆಗೆ ನಮ್ಮ ಆಕ್ಷೇಪ ಇಲ್ಲ. ಇಲ್ಲವಾದರೆ ಕೇವಲ ಚಟಕ್ಕೋಸ್ಕರ ಭಾಷಣ ಮಾಡಿದಂತಾಗುತ್ತದೆ. ಹೀಗಾಗಿ ನಾನು ವೈಯ್ಯಕ್ತಿಕವಾಗಿ ಲ್ಯಾಪ್​​ಟಾಪ್ ಖರೀದಿ ಅಕ್ರಮದ ಬಗ್ಗೆ ತನಿಖೆ ಆಗಬೇಕು ಎಂದು ಒತ್ತಾಯಿಸುತ್ತೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!