ಬಾಲಕೃಷ್ಣ 
ರಾಜಕೀಯ

ಡಿಕೆ ಬ್ರದರ್ಸ್ ವಿರುದ್ಧ ಎಚ್ ಸಿ ಬಾಲಕೃಷ್ಣ ಗರಂ: ಕಮಲ ಹಿಡಿಯಲಿದ್ದಾರಾ ಕೈ ನಾಯಕ?

ನನಗೆ ನನ್ನ ಕ್ಷೇತ್ರದ ಜನರಷ್ಟೇ ಮುಖ್ಯ, ಪಕ್ಷದ ನಾಯಕರಲ್ಲ ಎಂದು ಕಾಂಗ್ರೆಸ್‌ನ ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ಪಕ್ಷದ ನಾಯಕರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಮನಗರ: ನನಗೆ ನನ್ನ ಕ್ಷೇತ್ರದ ಜನರಷ್ಟೇ ಮುಖ್ಯ, ಪಕ್ಷದ ನಾಯಕರಲ್ಲ ಎಂದು ಕಾಂಗ್ರೆಸ್‌ನ ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ಪಕ್ಷದ ನಾಯಕರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನನ್ನು ಗೆಲ್ಲಿಸುವುದು ನನ್ನ ಕ್ಷೇತ್ರದ ಜನ ಮಾತ್ರ. ಪಕ್ಷದ ಯಾವುದೇ ನಾಯಕರು ನನ್ನನ್ನು ಗೆಲ್ಲಿಸಲ್ಲ ಎಂದು ಡಿಕೆ ಸಹೋದರರ ವಿರುದ್ಧ ಪರೋಕ್ಷವಾಗಿ ಕಿಡಿ ಕಾರಿದ್ದಾರೆ. ‘ನಾನು ಯಾವುದೇ ಪಕ್ಷವನ್ನು ನಂಬಿದವನಲ್ಲ. ನಮಗೆ ಪಕ್ಷಕ್ಕಿಂತ ಕಾರ್ಯಕರ್ತರು ಮುಖ್ಯ. ಅವರ ಆಶಯದಂತೆ ನಡೆಯುತ್ತೇನೆ’ ಎಂದೂ ಅವರು ಹೇಳಿದರು. ‘ಹಾಗಂತ ನಾನು ಕಾಂಗ್ರೆಸ್ ಬಿಡುತ್ತೇನೆ. ಬಿಜೆಪಿ ಸೇರುತ್ತೇನೆ ಎಂದು ಹೇಳಲಾರೆ. ಈಗ ಆ ಬಗ್ಗೆ ಮಾತನಾಡುವುದು ಸೂಕ್ತ ಅಲ್ಲ’ ಎಂದರು.

ನಾಯಕರ ಅವಶ್ಯಕತೆ ಬರುವುದು ನನಗೆ ಮಂತ್ರಿ ಸ್ಥಾನದ ಅವಕಾಶ ಬಂದಾಗ ಮಾತ್ರ. ಇಲ್ಲದಿದ್ದರೆ ಕ್ಷೇತ್ರದ ಜನರೇ ಎಲ್ಲ ಎಂದು ಹೇಳಿ ಬಂಡಾಯದ ಹಾದಿಯನ್ನು ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ತುಳಿದಿದ್ದಾರೆ.

ನನ್ನ ಬೆಳೆಸುವುದು, ಉಳಿಸುವುದು ಕ್ಷೇತ್ರದ ಜನರು ಮಾತ್ರ. ಇತ್ತೀಚೆಗೆ ಪಕ್ಷದ ನಾಯಕರ ನಡೆ ಬೇಸರ ತರಿಸಿದೆ. ಬಿಜೆಪಿ, ಜೆಡಿಎಸ್‌ನಲ್ಲಿದ್ದಾಗ ಎರಡೂ ಪಕ್ಷಗಳನ್ನು ಪ್ರಾಮಾಣಿಕವಾಗಿ ಕಟ್ಟಿ ಬೆಳೆಸಿದ್ದೇನೆ. ಆದರೆ, ಕಾಂಗ್ರೆಸ್‌ನಲ್ಲಿ ನನ್ನ ಶ್ರಮಕ್ಕೆ ಬೆಲೆ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!