ರಾಜಕೀಯ

ಎಪಿಎಂಸಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಹೆಸರಿಗಷ್ಟೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಮರೆತ ನಾಯಕರು

Manjula VN

ಬೆಂಗಳೂರು: ರಾಜ್ಯದಲ್ಲಿ ಎಪಿಎಂಸಿ ಕಾಯ್ದೆ ತಿದ್ದುಪಡಿ ಮೂಲಕ ರೈತರ ಮೇಲೆ ಬಂಡವಾಳಶಾಹಿಗಳು ಹಿಡಿತ ಸಾಧಿಸುವಂತೆ ರಾಜ್ಯ ಸರ್ಕಾರ ಮಾಡಿದೆ. ಹೀಗಾಗಿ ಎಪಿಎಂಸಿ ತಿದ್ದುಪಡಿ, ಕಾರ್ಮಿಕ ಕಾನೂನು ತಿದ್ದುಪಡಿ ಸೇರಿದಂತೆ ರಾಜ್ಯದ ಜನವಿರೋಧಿ ಕ್ರಮಗಳ ವಿರುದ್ಧ ಮತ್ತಷ್ಟು ಪ್ರತಿಭಟನೆ ನಡೆಸುವುದಾಗಿ ರಾಜ್ಯ ಕಾಂಗ್ರೆಸ್ ತಿಳಿಸಿದೆ. 

ಬುಧವಾರ ವಿಧಾನಸೌಧ ಆವರಣದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆ ಎದುರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಧೋರಣೆಗಳ ವಿರುದ್ಧ ಪ್ರತಿಭಟನೆ ನಡೆಸಿದರು. 

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಹೊರತುಪಡಿಸಿದರೆ, ಡಿಕೆಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಪ್ರತಿಭಟನೆ ಆರಂಭವಾದ ಕೆಲವೇ ನಿಮಿಷಗಳಲ್ಲಿ ಮಾಸ್ಕ್ ಗಳನ್ನು ಕೆಳಗಿಳಿಸಿರುವುದು ಕಂಡು ಬಂದಿತ್ತು. ಅಲ್ಲದೆ, ಪ್ರತಿಭಟನೆಯಲ್ಲಿ ಯಾವೊಬ್ಬ ನಾಯಕರೂ ಕೂಡ ಸಾಮಾಜಿಕ ಅಂತರವನ್ನು ಕಾಯ್ದುಕೊಂಡಿರಲಿಲ್ಲ. 

ಪ್ರತಿಭಟನೆ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು, ಎಪಿಎಂಸಿ ಕಾಯ್ದೆ ತಿದ್ದುಪಡಿ ಮೂಲಕ ಖಾಸಗಿಯವರಿಗೆ ರೈತರ ಮೇಲೆ ಹಿಡಿತ ಸಾಧಿಸಲು ಅವಕಾಶ ಮಾಡಿಕೊಟ್ಟಿದೆ. ಇದಲ್ಲದೆ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ಬದಲಿಗೆ ಪಕ್ಷದ ಕಾರ್ಯಕರ್ತರನ್ನು ನೇಮಕ ಮಾಡಲು ಹುನ್ನಾರ ನಡೆಸಿದೆ. ಸರ್ಕಾರವು ಇಂತಹ ಕ್ರಮಕ್ಕೆ ಮುಂದಾಗದೆ 6 ತಿಂಗಳು ಚುನಾವಣೆ ಮುಂದೂಡಬೇಕು. ಈ ವೇಳೆ ಹಾಲಿ ಸದಸ್ಯರನ್ನೇ ಮುಂದುವರೆಸಬೇಕು ಎಂದು ಒತ್ತಾಯಿಸಿದರು. 

SCROLL FOR NEXT