ರಾಜಕೀಯ

ಜೂನ್ 7 ರಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್‌ ಪದಗ್ರಹಣ

Srinivasamurthy VN

ಬೆಂಗಳೂರು: ಕೊರೋನಾ ಲಾಕ್‌ ಡೌನ್ ‌ನಿಂದಾಗಿ ಮುಂದೂಡಲ್ಪಟ್ಟಿದ್ದ ಡಿ‌.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಪದಗ್ರಹಣ ಕಾರ್ಯಕ್ರಮಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.

ಜೂನ್ 7 ರಂದು ಕೆಪಿಸಿಸಿ ಅಧ್ಯಕ್ಷರಾಗಿ ಕೆಪಿಸಿಸಿ ಕಚೇರಿಯಲ್ಲಿ ಶಿವಕುಮಾರ್ ಅಧಿಕಾರ ಸ್ವೀಕರಿಸಲಿದ್ದಾರೆ. ಸರಳವಾಗಿ ಅಧಿಕಾರ ಸ್ವೀಕಾರ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಶುಭ ಮುಹೂರ್ತದಲ್ಲಿ ಪಟ್ಟಕ್ಕೇರಲಿದ್ದಾರೆ.

ಅಂದು ಶಿವಕುಮಾರ್‌ಗೆ ದಿನೇಶ್ ಗುಂಡೂರಾವ್ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಕಾಂಗ್ರೆಸ್ ಹಿರಿಯ ನಾಯಕರು ಭಾಗಿಯಾಗಲಿದ್ದಾರೆ. ಕೊರೊನಾ ಪ್ರಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಶಿವಕುಮಾರ್ ನೇಮಕಗೊಂಡಿದ್ದರು. ಆದರೆ ಕೊರೋನಾ ಲಾಕ್ ಡೌನ್ ಇದ್ದ  ಕಾರಣ ಅಧಿಕಾರ ಸ್ವೀಕಾರ ಸ್ವೀಕರಿಸಲಿಲ್ಲ.

ಇದೀಗ ಲಾಕ್ ಡೌನ್ ಮುಗಿಯುತ್ತಿದ್ದಂತೆ ಸರಳವಾಗಿ ಅಧಿಕಾರ ಸ್ವೀಕಾರ ಸ್ವೀಕರಿಸಲಿದ್ದಾರೆ. ಕೊರೋನಾ ದೊಡ್ಡ ಮಟ್ಟದಲ್ಲಿ ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಚಿಂತಿಸಲಾಗಿತ್ತು. ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಬೆಂಗಳೂರಿಗೆ ಕರೆಯಿಸಿ ಪಕ್ಷದ ಅಧಿಕಾರ  ವಹಿಸಿಕೊಳ್ಳಲು ಯೋಚಿಸಿದ್ದರು. ಆದರೆ ಕೊರೋನಾದಿಂದ ಇದೀಗ ದೊಡ್ಡ ಮಟ್ಟದ ಕಾರ್ಯಕ್ರಮವನ್ನು ಬದಿಗಿಟ್ಟು ಸರಳವಾಗಿ ಅಧಿಕಾರ ಸ್ವೀಕರಿಸಲು ಮುಂದಾಗಿದ್ದಾರೆ.

SCROLL FOR NEXT