ರಾಜಕೀಯ

ಬೆಂಗಳೂರು: ಜೂನ್ 7ರಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣ

Shilpa D

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕವಾದ ಮೂರು ತಿಂಗಳ ಬಳಿಕ ಡಿಕೆ ಶಿವಕುಮಾರ್ ಜೂನ್ 7 ರಂದು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕರು, ದೆಹಲಿಯ ಮುಖಂಡರು ಹಾಗೂ ನೆರೆ ರಾಜ್ಯದ ಆಪ್ತ ರಾಜಕಾರಣಿಗಳು ಸೇರಿದಂತೆ ಸುಮಾರು 200 ಮಂದಿ ಭಾಗವಹಿಸುವ ಸಾಧ್ಯತೆಯಿದೆ.

ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ಡಿಕೆ ಶಿವಕುಮಾರ್ ತಿಹಾರ್ ಜೈಲಿನಿಂದ ಬಿಡುಗಡೆಯಾದ ಬಳಿಕ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಅವರ ಹೆಸರು ಕೇಳಿ ಬಂದಿತ್ತು. ಸುಮಾರು ದಿನಗಳ ವಿಳಂಬದ ನಂತರ ಮಾರ್ಚ್ ತಿಂಗಳಲ್ಲಿ ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದರು.

ಮೇ ತಿಂಗಳಲ್ಲಿಯೇ ಶಿವಕುಮಾರ್ ಅಧಿಕಾರ ಸ್ವೀಕರಿಸಬೇಕಿತ್ತು, ಆದರೆ ಲಾಕ್ ಡೌನ್ ಕಾರಣದಿಂದಾಗಿ ಮುಂದೂಡಲಾಗಿತ್ತು. ಮೇ 31 ರಂದು ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ಹೇಳಲಾಗಿತ್ತು, ಆದರೆ ಜೂನ್ 7ಕ್ಕೆ ಕಾರ್ಯಕ್ರಮ ನಿಗದಿ ಪಡಿಸಲಾಗಿದೆ.

SCROLL FOR NEXT