ಸುಮಲತಾ 
ರಾಜಕೀಯ

ಸ್ವಾಭಿಮಾನದ ಗೆಲುವಿಗೆ ಒಂದು ವರ್ಷ: ಸುಮಲತಾ ಕೃತಜ್ಞತೆ

ಕನ್ನಡದ ಹಿರಿಯ ನಟಿ, ಸಂಸದೆ ಸುಮಲತಾ ಅಂಬರೀಶ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಾಧಿಸಿದ ಗೆಲುವಿಗೆ ಮೇ 23ಕ್ಕೆ ಒಂದು ವರ್ಷ ತುಂಬಿದೆ. ಈ ಸಂದರ್ಭದಲ್ಲಿ ಅವರು ನಾಡಿನ ಜನತೆಗೆ ಕೃತಜ್ಞತೆ ಅರ್ಪಿಸಿದ್ದಾರೆ.

ಬೆಂಗಳೂರು: ಕನ್ನಡದ ಹಿರಿಯ ನಟಿ, ಸಂಸದೆ ಸುಮಲತಾ ಅಂಬರೀಶ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಾಧಿಸಿದ ಗೆಲುವಿಗೆ ಮೇ 23ಕ್ಕೆ ಒಂದು ವರ್ಷ ತುಂಬಿದೆ. ಈ ಸಂದರ್ಭದಲ್ಲಿ ಅವರು ನಾಡಿನ ಜನತೆಗೆ ಕೃತಜ್ಞತೆ ಅರ್ಪಿಸಿದ್ದಾರೆ.

ಭಾರತೀಯ ರಾಜಕೀಯ ರಂಗದಲ್ಲೇ ಸಂಚಲನ ಮೂಡಿಸಿದ್ದ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ತಾವು ನನ್ನನ್ನು ಗೆಲ್ಲಿಸಿ ಮೇ 23ಕ್ಕೆ ಒಂದು ವರ್ಷ ಪೂರೈಸಿದೆ. ಈ ಅಭೂತಪೂರ್ವ ಗೆಲುವಿಗೆ ಕಾರಣರಾದ ಎಲ್ಲರಿಗೂ ಕೃತಜ್ಞತೆ ಅರ್ಪಿಸುವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರ ಭಾರಿ ರಣರಂಗಕ್ಕೆ ಕಾರಣವಾಗಿತ್ತು. ಆದರೂ ತಾವು ನಿರಾತಂಕವಾಗಿ ನನ್ನನ್ನು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಸಿದಿರಿ. ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿದ್ದ ನನ್ನನ್ನು ನಿರೀಕ್ಷೆಗೂ ಮೀರಿ ಗೆಲ್ಲಿಸಿದಿರಿ. ಇದು ತಮ್ಮೆಲ್ಲರ ಗೆಲುವು ಎಂದು ಹೇಳಲು ಹೆಮ್ಮೆಯಿದೆ ಎಂದಿದ್ದಾರೆ.

ಸಂಸದೆಯಾದ ಬಳಿಕ ಮಂಡ್ಯ ಕ್ಷೇತ್ರಕ್ಕೆ ಅನೇಕ ಕೆಲಸ ಕಾರ್ಯಗಳನ್ನು ಮಾಡಿದ್ದು, ಮುಂದಿನ ದಿನಗಳಲ್ಲಿ ಅನೇಕ ಯೋಜನೆಗಳನ್ನು ಜಾರಿಗೊಳಿಸುವ ಚಿಂತನೆಯಿದೆ ಎಂದು ಸುಮಲತಾ ಅಂಬರೀಷ್ ಹೇಳಿಕೊಂಡಿದ್ದಾರೆ.

ಇದೇ ವೇಳೆ ಕೊರೋನಾ ಸಂಕಷ್ಟದ ಈ ಸಂದರ್ಭದಲ್ಲಿ ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಂಡು ಸೋಂಕು ಹರಡದ ರೀತಿ ಜವಾಬ್ದಾರಿಯುತವಾಗಿ ವರ್ತಿಸುವಂತೆ ಮನವಿ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್