ನಳಿನ್ ಕುಮಾರ್ ಕಟೀಲ್ ಮತ್ತು ಡಿಕೆ ಶಿವಕುಮಾರ್ 
ರಾಜಕೀಯ

ಖಾಲಿ ಉಳಿದಿವೆ ಪ್ರಮುಖ ಹುದ್ದೆಗಳು: ಪದಾಧಿಕಾರಿಗಳ ನೇಮಕದ ಬಗ್ಗೆ ಕಾಂಗ್ರೆಸ್-ಬಿಜೆಪಿ ದಿವ್ಯ ನಿರ್ಲಕ್ಷ್ಯ!

ಕೊರೋನಾ  ಸಾಂಕ್ರಾಮಿಕ ರೋಗ ಕರ್ನಾಟಕದ ಎರಡು ಬಹುದೊಡ್ಡ ಪಕ್ಷಗಳಿಗೆ ಅನಿರೀಕ್ಷಿತ ಸಮಸ್ಯೆಗಳನ್ನು ತಂದೊಡ್ಡಿದೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿ ಹಲವು ಹುದ್ದೆಗಳು ಖಾಲಿಯಿದ್ದು ನೇಮಕ ಮಾಡಲು ಸಾಧ್ಯವಾಗುತ್ತಿಲ್ಲ,

ಬೆಂಗಳೂರು: ಕೊರೋನಾ  ಸಾಂಕ್ರಾಮಿಕ ರೋಗ ಕರ್ನಾಟಕದ ಎರಡು ಬಹುದೊಡ್ಡ ಪಕ್ಷಗಳಿಗೆ ಅನಿರೀಕ್ಷಿತ ಸಮಸ್ಯೆಗಳನ್ನು ತಂದೊಡ್ಡಿದೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿ ಹಲವು ಹುದ್ದೆಗಳು ಖಾಲಿಯಿದ್ದು ನೇಮಕ ಮಾಡಲು ಸಾಧ್ಯವಾಗುತ್ತಿಲ್ಲ,

ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ಪದಾಧಿಕಾರಿಗಳ ನೇಮಕ 2 ಪಕ್ಷಗಳಿಗೂ ಮಹತ್ವದ ವಿಷಯವಾಗಿದೆ. 2019 ರ ಆಗಸ್ಟ್ ನಲ್ಲಿ ನಳಿನ್ ಕುಮಾರ್ ಕಟೀಲ್ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿದ ನಂತರ ಹಲವು ಜಿಲ್ಲೆಗಳ ಪ್ರವಾಸ ಕೈಗೊಂಡರು, ಜಿಲ್ಲಾಧ್ಯಕ್ಷರುಗಳ ಬದಲಾವಣೆ ಜನವರಿಯಲ್ಲಿ ನಡೆಯಿತು. ಉಪಾಧ್ಯಕ್ಷ, ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಮತ್ತಿ ಖಜಾಂಚಿ ಹುದ್ದೆಗಳಿಗೆ ಇನ್ನೂ ನೇಮಕವಾಗಿಲ್ಲ,


ಇದರ ಜೊತೆಗೆ ಮಹಿಳಾ ಮೋರ್ಚಾ, ಎಸ್ ಎಸ್ಸಿ ಎಸ್ ಟಿ ಮತ್ತು ಯುವ ಘಟಕಗಳಿಗೆ ಇನ್ನೂ ನೇಮಕವಾಗಿಲ್ಲ, ನೂರಕ್ಕೂ ಹೆಚ್ಚಿನ ಹುದ್ದೆಗಳಿಗೆ ಇನ್ನೂ ನೇಮಕವಾಗಿಲ್ಲ. ಹೊಸ ಪದಾಧಿಕಾರಿಗಳ ನೇಮಕದ ಪಟ್ಟಿಯನ್ನು ಹೈ ಕಮಾಂಡ್ ಗೆ ಕಳುಹಿಸಲಾಗಿದೆ, ಆದರೆ  ಇನ್ನೂ ಪಟ್ಟಿ ಅಂತಿಮವಾಗಿ ಬಂದಿಲ್ಲ.

ಇದೇ ವೇಳೆ ಕಾಂಗ್ರೆಸ್ ಹಿರಿಯ ನಾಯಕ ಡಿಕೆ ಶಿವಕುಮಾರ್  ಕೆಪಿಸಿಸಿ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ, ಜೂನ್ 7ರಂದು ಅಧಿಕಾರ ಸ್ವೀಕಾರ ,ಸಾಧ್ಯತೆಯಿದ್ದು, ಅದಾದ ನಂತರ ಪದಾದಿಕಾರಿಗಳ ನೇಮಕ ಆಗುವ ಸಾದ್ಯತೆಯಿದೆ ಎಂದು  ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ